ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸು- ಮಾಧುಸ್ವಾಮಿ

Public TV
1 Min Read

ತುಮಕೂರು: ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವ ಸ್ಥಿತಿ ತರದೇ ಹೋದರೆ ಕಷ್ಟವಾಗಲಿದೆ. ಹಾಗಾಗಿ ಕೆಲ ಕಾನೂನು ತಿದ್ದುಪಡಿ ಮಾಡುವಂತೆ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಎನ್ ಕೌಂಟರ್ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ನಮ್ಮ ಕಾನೂನಿನಲ್ಲೇ ಕೆಲ ತಿದ್ದುಪಡಿಯಾಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಐಪಿಸಿ ಕಾಯಿದೆಯನ್ನ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕಿದ್ದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಎರಡ್ಮೂರು ಕಾನೂನು ವಿಷಯದಲ್ಲಿ ನಾನು ಕೇಂದ್ರಕ್ಕೆ ಶಿಫಾರಸು ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

1860 ರಲ್ಲಿ ಆಗಿರುವಂತಹ ಭಾರತೀಯ ದಂಡ ಸಂಹಿತೆ(ಐಪಿಸಿ), ಅಪರಾಧ ಪ್ರಕ್ರಿಯೆ ಸಂಹಿತೆ(ಸಿಆರ್ ಪಿಸಿ) ಕಾಯಿದೆಯಲ್ಲಿ ಏನೂ ಸತ್ವ ಇಲ್ಲದಾಗಿದ್ದು ಅದರ ತಿದ್ದುಪಡಿ ಆಗಬೇಕಾದ ಇಂಗಿತವನ್ನ ಮಾಧುಸ್ವಾಮಿ ವ್ಯಕ್ತಪಡಿಸಿದ್ದಾರೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಮಾಡಿದರೆ 1 ಸಾವಿರ ರೂ ದಂಡ ಅಂತಿದ್ದು, ಆ 1 ಸಾವಿರ ರೂ ದಂಡ ಆರೋಪಿಗಳು ಖುಷಿಯಾಗಿ ಕೊಟ್ಟು ಹೋಗುತ್ತಾರೆ. ಈ ಬಗ್ಗೆ ಕಾನೂನು ಬಿಗಿಯಾಗಬೇಕಿದೆ. ಇದರ ಕುರಿತು ನಾವು ಸೆಮಿನಾರ್ ಮಾಡಿ ಚರ್ಚೆ ಮಾಡಿ ಕಾನೂನು ತಿದ್ದುಪಡಿ ಮಾಡುವಂತೆ ಸಂಸತ್ತಿಗೆ ಸಲಹೆ ನೀಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವ ಸ್ಥಿತಿ ತರದೇ ಹೋದರೆ ಕಷ್ಟವಾಗಲಿದ್ದು ಆ ನಿಟ್ಟಿನಲ್ಲಿ ನಾವು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಇಂತಹ ಪ್ರಕರಣ ಆಗಲು ಬಿಡೋದಿಲ್ಲ. ನಾನು ಮತ್ತು ಗೃಹ ಸಚಿವರು ಸದಾ ಸಂಪರ್ಕದಲ್ಲಿ ಇದ್ದು, ಮುಖ್ಯವಾಗಿ ಬೆಂಗಳೂರು ನಗರವನ್ನ ಮಾನಿಟರಿಂಗ್ ಮಾಡುತ್ತಿದ್ದೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *