Boycott Turkey| ಕೇಂದ್ರದ ವಿರುದ್ಧ ಕೋರ್ಟ್‌ ಮೊರೆ ಹೋದ ಸೆಲಿಬಿ

By
2 Min Read

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಪ್ರಾಥಮಿಕ ಹಂತದ ಸೇವೆಗಳನ್ನು ನೀಡಲು ನೀಡಿದ್ದ ಲೈಸನ್ಸ್‌ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟರ್ಕಿಯ (Turkey) ಸೆಲೆಬಿ (Celebi) ಕಂಪನಿ ದೆಹಲಿ ಹೈಕೋರ್ಟ್‌ (Delhi High Court) ಮೊರೆ ಹೋಗಿದೆ.

ನಮ್ಮ ಕಂಪನಿ ರಾಷ್ಟ್ರೀಯ ಭದ್ರತೆಗೆ ಹೇಗೆ ಬೆದರಿಕೆಯಾಗಿದೆ ಎಂಬುದನ್ನು ವಿವರಿಸದೇ ಲೈಸನ್ಸ್‌ ರದ್ದುಗೊಳಿಸಿದ್ದು ಸರಿಯಲ್ಲ. ಇದರಿಂದಾಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 3,791 ಉದ್ಯೋಗಿಗಳು ಮತ್ತು ಹೂಡಿಕೆದಾರರ ವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ಸೆಲಿಬಿ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಕಂಪನಿಗೆ ಯಾವುದೇ ಎಚ್ಚರಿಕೆ ನೀಡದೇ ನಿರ್ಧಾರ ಕೈಗೊಳ್ಳಲಾಗಿದೆ. ರದ್ದತಿಗೆ ಯಾವುದೇ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಕಂಪನಿ ಟರ್ಕಿಯಲ್ಲಿ ಹೆಸರು ನೋಂದಣಿಯಾಗಿದ್ದರೂ ಬಹುತೇಕ ಹೂಡಿಕೆದಾರು ಟರ್ಕಿ ಮೂಲವನ್ನು ಹೊಂದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

ದೇಶದ 9 ವಿಮಾನ ನಿಲ್ದಾಣಗಳಲ್ಲಿ ಪ್ರಾಥಮಿಕ ಹಂತದ ಸೇವೆಗಳನ್ನು ನೀಡುತ್ತಿದ್ದ ಟರ್ಕಿಯ ಸೆಲೆಬಿ (Celebi) ಏವಿಯೇಷನ್ ಕಂಪನಿಗೆ ನೀಡಲಾಗಿದ್ದ ಸೇವಾ ಲೈಸನ್ಸ್ ಗಳನ್ನು ಭಾರತೀಯ ನಾಗರಿಕ ವಿಮಾನಯಾನ ಸುರಕ್ಷಾ ಬ್ಯೂರೋ (ಬಿಸಿಸಿಎಸ್) ಮೇ 15 ರದ್ದು ಮಾಡಿತ್ತು. ರಾಷ್ಟ್ರೀಯ ಭದ್ರತಾ ಕಾಳಜಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿತ್ತು.

ಬೆಂಗಳೂರು, ಮುಂಬೈ, ದೆಹಲಿ, ಹೈದರಾಬಾದ್‌, ಕೊಚ್ಚಿನ್‌, ಕಣ್ಣೂರು, ಚೆನ್ನೈ, ಗೋವಾದಲ್ಲಿ ಈ ಕಂಪನಿ ಪ್ರಾಥಮಿಕ ಸೇವೆ ನೀಡುತ್ತಿತ್ತು. ಸದ್ಯವೇ ವಿಶಾಖಪಟ್ಟಣಂ ವಿಮಾನ ನಿಲ್ದಾಣದಲ್ಲಿ ಪ್ರಾಥಮಿಕ ಸೇವೆಗಳನ್ನು ನೀಡುವ ಗುತ್ತಿಗೆಯ ಆ ಕಂಪನಿ ಪಡೆಯಲು ಸಿದ್ಧತೆ ನಡೆಸಿತ್ತು. ಅಷ್ಟರಲ್ಲೇ ಭಾರತ ಸರ್ಕಾರ ಸೆಲೆಬಿಗೆ ನೀಡಲಾಗಿದ್ದ ಸೇವಾ ಲೈಸೆನ್ಸ್‌ ರದ್ದುಗೊಳಿಸಿದೆ. ಇದನ್ನೂ ಓದಿ: ಟರ್ಕಿಗೆ ಬೆಂಗಳೂರು ಶಾಕ್‌ – ಸೆಲೆಬಿ ಏವಿಯೇಷನ್‌ ಏರ್‌ಪೋರ್ಟ್‌ ಸೇವೆ ಸ್ಥಗಿತ

ಸೆಲೆಬಿ ಏವಿಯೇಷನ್ ​​ಎರಡು ಪ್ರತ್ಯೇಕ ಘಟಕಗಳನ್ನು ಹೊಂದಿದೆ. ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ವಿಮಾನ ನಿಲ್ದಾಣ ನಿರ್ವಹಣೆ ಕಾರ್ಯಾಚರಣೆ ನಡೆಸುತ್ತಿದ್ದರೆ ಸೆಲೆಬಿ ದೆಹಲಿ ಕಾರ್ಗೋ ಟರ್ಮಿನಲ್ ಮ್ಯಾನೇಜ್‌ಮೆಂಟ್ ಇಂಡಿಯಾ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸೇವೆಗಳನ್ನು ಮೇಲ್ವಿಚಾರಣೆ ಮಾಡುತ್ತಿತ್ತು.

ಸೆಲೆಬಿ 2008 ರಲ್ಲಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಂಟಿ ಉದ್ಯಮದ ಮೂಲಕ ಭಾರತವನ್ನು ಪ್ರವೇಶಿಸಿತು. ಸೆಲೆಬಿ ಕಂಪನಿಗೆ ಕೆಲಸ ನಿರ್ವಹಿಸಲು ಯುಪಿಎ ಸರ್ಕಾರ ಅನುಮತಿ ನೀಡಿತ್ತು.

ಮುಂಬೈ ದಾಳಿಯಾದ ನಂತರ ಬಾಳಾಸಾಹೇಬ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆಗೆ ಸಂಯೋಜಿತವಾಗಿರುವ ಅನೇಕ ವಾಯುಯಾನ ಕಾರ್ಮಿಕ ಸಂಘಗಳು, ಭಾರತದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಸೆಲೆಬಿಗೆ ಅನುಮತಿ ನೀಡಿದ್ದನ್ನು ಭಾರೀ ವಿರೋಧಿಸಿದ್ದವು.

Share This Article