ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

1 Min Read

ಮುಂಬೈ: ತಮಿಳುನಾಡು ವಿಧಾನಸಭಾ ಚುನಾವಣೆಯ (Tamilnadu Assembly Election) ಫಲಿತಾಂಶಕ್ಕೂ ಮುನ್ನ ಟಿವಿಕೆ ಅಧ್ಯಕ್ಷ, ನಟ ವಿಜಯ್ ಮಹಾರಾಷ್ಟ್ರ ಶಿರಡಿ (Shiradi) ಸಾಯಿಬಾಬಾ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಏ.23ರಂದು ಮತದಾನ ನಡೆದಿದ್ದು, ಮೇ 4ರಂದು ಮತಎಣಿಕೆಯಾಗಿ ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಂದು (ಏ.29) ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದನ್ನೂ ಓದಿ: Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

ಸಾಮಾಜಿಕ ಮಾಧ್ಯಮಗಳಲ್ಲಿ ನಟ ವಿಜಯ್ ಭೇಟಿಯ ಹಾಗೂ ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿವೆ. ಇದಕ್ಕೂ ಮುನ್ನ ವಿಜಯ್ ತಮಿಳುನಾಡಿನ ತಿರುಚೆಂಡೂರ್ ಮುರುಗನ್ ದೇವಾಲಯಕ್ಕೂ ಭೇಟಿ ನೀಡಿದ್ದರು.

ತಮಿಳುನಾಡು ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಬಹುಮತ ನೀಡಿದೆ. ಇದರ ಹೊರತಾಗಿ ಬಹುತೇಕ ಸಮೀಕ್ಷೆಗಳು ಡಿಎಂಕೆಗೆ ಬಹುಮತ ನೀಡಿದೆ. ಹೀಗಾಗಿ ಹೊಸ ಪಕ್ಷ ಕಟ್ಟಿ ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಫಲಿತಾಂಶದಲ್ಲಿ ಮ್ಯಾಜಿಕ್ ಮಾಡಿದ್ದಾರೆ ಎನ್ನಲಾಗಿದೆ. ತಾನು ಎದುರಿಸಿದ ಮೊದಲ ಚುನಾವಣೆಯಲ್ಲೇ ಪಟ್ಟಕೇರುವ ಸಾಧ್ಯತೆಗಳಿವೆ ಎಂದು ಚುನಾವಣೋತ್ತರ ಸಮೀಕ್ಷೆ ತಿಳಿಸಿದೆ.

ಡಿಎಂಕೆ 92 ರಿಂದ 110 ಸ್ಥಾನಗಳು, ಎಐಎಡಿಎಂಕೆ 22 ರಿಂದ 32 ಸ್ಥಾನಗಳನ್ನ ಗಳಿಸಿದ್ರೆ, ಟಿವಿಕೆ ಪಕ್ಷ 98 ರಿಂದ 120 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಿದೆ.ಇದನ್ನೂ ಓದಿ:Exi t Poll Results 2026 | ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಪಟ್ಟಾಭಿಷೇಕ – ದಳಪತಿಯ ಟಿವಿಕೆಗೆ ಹೀನಾಯ ಸೋಲು

Share This Article