ಪವನ್ ಕಲ್ಯಾಣ್ ಅಭಿಮಾನಿಗಳಿಗೆ ಇದು ನಿಜಕ್ಕೂ ಸಂತಸದ ಸುದ್ದಿ

Public TV
1 Min Read

ಟಾಲಿವುಡ್‌ (Tollywood) ಸೂಪರ್ ಹೀರೋ ಪವನ್ ಕಲ್ಯಾಣ್‌ಗೆ (Pawan Kalyan) ಅಪಾರ ಅಭಿಮಾನಿಗಳ ಬಳಗವಿದೆ. ಅವರ ಜನ್ಮದಿನವನ್ನು ಹಬ್ಬದಂತೆ ಸೆಲೆಬ್ರೇಟ್ ಮಾಡುವ ಅಭಿಮಾನಿಗಳಿದ್ದಾರೆ. ಈಗ ಅವರ ಹುಟ್ಟುಹಬ್ಬದ ಪ್ರಯುಕ್ತ ಪವನ್ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ಮಾಲಾಶ್ರೀ ಕೋರಿಕೆಯನ್ನ ಈಡೇರಿಸಿದ ದೈವ- ಕೊರಗಜ್ಜನ ಆದಿಸ್ಥಳಕ್ಕೆ ನಟಿ ಭೇಟಿ

ತೆಲುಗಿನ ಸ್ಟಾರ್ ನಟರಲ್ಲಿ ಒಬ್ಬರಾಗಿರೋ ಪವನ್ ಕಲ್ಯಾನ್ ಅವರು ಸಿನಿಮಾ- ರಾಜಕೀಯ ಎರಡರಲ್ಲೂ ಸದ್ದು ಮಾಡ್ತಿದ್ದಾರೆ. ರಾಜಕೀಯದ ಜೊತೆಗೆ ಆಕ್ಟಿಂಗ್ ಪವನ್ ಬ್ಯಾಲೆನ್ಸ್ ಮಾಡ್ತಿದ್ದಾರೆ. ಮುಂದಿನ ತಿಂಗಳು ಸೆಪ್ಟೆಂಬರ್ 2ರಂದು ಅವರ ಹುಟ್ಟುಹಬ್ಬವಾಗಿದ್ದು, ನಟನ ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ.

ಪವನ್ ಕಲ್ಯಾಣ್ ನಟನೆಯ ಎರಡು ಟಾಪ್ ಸಿನಿಮಾಗಳು ಇದೀಗ ಅಭಿಮಾನಿಗಳಿಗೋಸ್ಕರ ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ರಿ-ರಿಲೀಸ್ ಆಗಲಿವೆ. 2004ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್ ಹಿಟ್ ಆಗಿದ್ದ ‘ಗುಡುಂಬಾ ಶಂಕರ್’ ಮತ್ತು 2012ರಲ್ಲಿ ಪ್ರೇಕ್ಷಕರ ಮನಗೆದ್ದ ‘ಗಬ್ಬರ್ ಸಿಂಗ್’ ಚಿತ್ರಗಳು ತೆರೆ ಮೇಲೆ ಮತ್ತೊಮ್ಮೆ ರಾರಾಜಿಸಲಿದೆ. ಈ ಬಗ್ಗೆ ನಾಗಬಾಬು ಅವರು ಮಾಹಿತಿ ನೀಡಿದ್ದು, ಸಿನಿಮಾಗಳನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮರು ಬಿಡುಗಡೆ ಮಾಡಲಿದ್ದೇವೆ ಎಂದು ಘೋಷಿಸಿದ್ದಾರೆ.

ಪವನ್ ಕಲ್ಯಾಣ್ ನಟನೆಯ ಚಿತ್ರ ಮರು ಬಿಡುಗಡೆಯಲ್ಲಿ ಗಳಿಸುವ ಆದಾಯವನ್ನು ಜನಸೇನಾ ಪಕ್ಷಕ್ಕೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್