ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

By
0 Min Read

ವಿಜಯಪುರ: ಈಜಲು ತೆರಳಿದ್ದ ಇಬ್ಬರು ಬಾಲಕರು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಿಂದಗಿಯ (Sindagi) ಗೋಲಗೇರಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಎಂದು ಗುರುತಿಸಲಾಗಿದೆ. ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಬಾಲಕರು ಬಾವಿಯಲ್ಲಿ ಈಜಾಡಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಕಾರಣ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಸಿಂದಗಿ ಪೊಲೀಸ್ (Sindagi Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article