ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ

Public TV
0 Min Read

ಹಾಸನ: ಎರಡು ಸಾರಿಗೆ ಬಸ್ಸುಗಳು (Bus) ಮುಖಾಮುಖಿ ಡಿಕ್ಕಿಯಾದ ಘಟನೆ ಸಕಲೇಶಪುರ (Sakleshpur) ತಾಲ್ಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ನಡೆದಿದೆ.

ಒಂದು ಬಸ್ಸು ಮೂಡಿಗೆರೆಗೆ ತೆರಳುತ್ತಿದ್ದರೆ ಇನ್ನೊಂದು ಬಸ್ಸು ಸಕಲೇಶಪುರಕ್ಕೆ ಬರುತ್ತಿತ್ತು. ಎರಡು ಬಸ್ಸುಗಳಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

ಬೆಳಗ್ಗೆ ಅಪಘಾತ ಸಂಭವಿಸಿದ್ದರಿಂದ ಎರಡು ಬಸ್ಸಿನಲ್ಲಿ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article