-489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಚತುರ್ಥಿ (Ganesh Chaturthi) ಹಿನ್ನೆಲೆ ಬಿಬಿಎಂಪಿ (BBMP) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ.
ಗಣೇಶ ಚತುರ್ಥಿಗೆ ಇನ್ನೇನು ಎರಡೇ ದಿನ ಬಾಕಿಯಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 75 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳ ಸ್ಥಾಪನೆ ಮಾಡಲಾಗಿದ್ದು, ಜೊತೆಗೆ ಬೆಂಗಳೂರಿನಾದ್ಯಂತ 489 ತಾತ್ಕಾಲಿಕ ಸಂಚಾರಿ ಕಲ್ಯಾಣ ವಾಹನಗಳ ವ್ಯವಸ್ಥೆ ಮಾಡಲಾಗಿದೆ.ಇದನ್ನೂ ಓದಿ: ತವರೂರು ಲಕ್ನೋದಲ್ಲಿ ಶುಭಾಂಶು ಶುಕ್ಲಾಗೆ ಭರ್ಜರಿ ಸ್ವಾಗತ
ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಒದಗಿಸಲಿದೆ. ಅದಲ್ಲದೇ ಬಿಬಿಎಂಪಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
ಇನ್ನೂ ರಾಜರಾಜೇಶ್ವರಿ ನಗರ (Raja Rajeshwari Nagar) ವಲಯ ವ್ಯಾಪ್ತಿಯಲ್ಲಿ ಬರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ತಾಂತ್ರಿಕ ಕಾರಣಗಳಿಂದ ಹೇರೋಹಳ್ಳಿ ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಸ್ಥಗಿತಗೊಳಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಯಡಿಯೂರು ಕೆರೆಯಲ್ಲಿ (Yadiyuru Lake) ಗಣೇಶ ವಿಸರ್ಜನೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.27ರಿಂದ ಸೆ.17ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ನೀಡಿದೆ.ಇದನ್ನೂ ಓದಿ: ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್