ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

Public TV
1 Min Read

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Mysuru Expressway) ಕಾರುಗಳ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ.

ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಾಸನ| ನಿಲ್ಲಿಸಿದ್ದ ಕಾರಿನ ಡೋರ್‌ ತೆಗೆದು 6.30 ಲಕ್ಷ ಹಣ ಎಗರಿಸಿದ ಕಳ್ಳ

ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಕೆಲವರಿಗೆ ಬೆಂಗಳೂರು ಹಾಗೂ ಇನ್ನೂ ಕೆಲವರಿಗೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

Share This Article