ಖಾಸಗಿ ಬಸ್ ಪಲ್ಟಿ – ಶಾಲಾ ಅಡ್ಮಿಷನ್ ಗಾಗಿ ಬೆಂಗ್ಳೂರಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೇರಿ ಇಬ್ಬರು ದಾರುಣ ಸಾವು

Public TV
1 Min Read

ಹಾಸನ: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ.

ಶಶಿಧರ್ (14) ಮತ್ತು ದಯಾನಂದ್(38) ಮೃತ ದುರ್ದೈವಿಗಳು. ಈ ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಖಾಸಗಿ ಬಸ್ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ 21 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬ್ಯಾಡರಹಳ್ಳಿ ಗೇಟ್ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿದ್ದೆ ಮಂಪರು ಹಾಗೂ ಬಸ್ ನ ತಾಂತ್ರಿಕ ದೋಷದಿಂದ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಶಶಿಧರ್ ಶಾಲಾ ಅಡ್ಮಿಷನ್ ಗಾಗಿ ಬೆಂಗಳೂರಿಗೆ ತೆರಳುತ್ತಿದ್ದನು. ಬಸ್ ಪಲ್ಟಿಯಾದ ಪರಿಣಾಮ ಶಶಿಧರ್ ಮತ್ತು ದಯಾನಂದ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *