ನವದೆಹಲಿ: ಈಜು ತರಬೇತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದೆಹಲಿಯ (Delhi) ನರೇಲಾದಲ್ಲಿ (Narela) ನಡೆದಿದೆ.
ಆಗಸ್ಟ್ 7ರಂದು ಲಾಂಪೂರ್ (Lampur) ಬಸ್ ನಿಲ್ದಾಣದ ಬಳಿಯ ಈಜುಕೊಳದಲ್ಲಿ (Swimming Pool) ಈ ಘಟನೆ ನಡೆದಿದೆ. ಆಗಸ್ಟ್ 8ರಂದು ಬಾಲಕಿಯ ತಾಯಿ ನರೇಲಾ ಪೊಲೀಸ್ ಠಾಣೆಗೆ ಬಂದು ಈಜು ತರಬೇತಿಗೆ ತೆರಳಿದ್ದ ವೇಳೆ ತನ್ನ ಮಗಳು ಮತ್ತು ಇನ್ನೊಬ್ಬ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ
ತಾಯಿಯ ಹೇಳಿಕೆಯನ್ನು ಆಧರಿಸಿ ಆಗಸ್ಟ್ 9ರಂದು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 70 (2) (ಸಾಮೂಹಿಕ ಅತ್ಯಾಚಾರ), 127 (2) ಮತ್ತು 351 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಸಂತ್ರಸ್ತ ಬಾಲಕಿಯರು ಬಿಎನ್‌ಎಸ್‌ಎಸ್ ಸೆಕ್ಷನ್ 183ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರವಿಲ್ಲ – ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ
ಘಟನೆ ಸಂಬಂಧ ಬಿಹಾರದ ಸಮಷ್ಟಿಪುರ ಜಿಲ್ಲೆಯ ನಿವಾಸಿ ಅನಿಲ್ ಕುಮಾರ್ (37) ಮತ್ತು ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಮುನಿಲ್ ಕುಮಾರ್ (24) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆಯ ಸಮಯದಲ್ಲಿ, ಪೊಲೀಸರು ಆರೋಪಿಯ ಸೂಚನೆಯ ಮೇರೆಗೆ ದಿಂಬಿನ ಕವರ್, ಬೆಡ್‌ಶೀಟ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಇಬ್ಬರೂ ಆರೋಪಿಗಳ ಮೇಲೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ – ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್