ರಸ್ತೆ ಪಕ್ಕದ ಕಂಬಕ್ಕೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

Public TV
1 Min Read

ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್ (Bike) ಡಿಕ್ಕಿಯಾದ (Accident) ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶಿವಮೊಗ್ಗದ (Shivamogga) ಕಾನೇಹಳ್ಳ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಆರ್‍ಎಂಎಲ್ ನಗರದ ನಿವಾಸಿ ನಿಸಾರ್, ಮಂಜುನಾಥ ಬಡಾವಣೆ ನಿವಾಸಿ ಯಶವಂತ್ ಎಂದು ಗುರುತಿಸಲಾಗಿದೆ. ಮೃತರು ಗಾಜನೂರಿನ ಐಟಿಐ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಸವಾರರ ತಲೆಗೆ ಬಲವಾದ ಹೊಡೆತ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಯಶವಂತ್ ದ್ವಿತೀಯ ವರ್ಷದ ಹಾಗೂ ನಿಸಾರ್ ಮೊದಲನೆ ವರ್ಷದ ಐಟಿಐ ವಿದ್ಯಾರ್ಥಿಯಾಗಿದ್ದರು.

ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು (Police) ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Share This Article