ನೆಲಮಂಗಲ: ತುಮಕೂರು- ಬೆಂಗಳೂರು (Tumakuru-Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ (Accident) ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಬೈಕ್ ಡಿಕ್ಕಿ, ಧಗಧಗಿಸಿದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು – 10ಕ್ಕೂ ಹೆಚ್ಚು ಮಂದಿ ಸಜೀವ ದಹನ
ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
