ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ -‌ ಆಟೋ ಚಾಲಕ ಸೇರಿ ಇಬ್ಬರು ಅರೆಸ್ಟ್

Public TV
1 Min Read

ದಾವಣಗೆರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಇಬ್ಬರನ್ನು ದಾವಣಗೆರೆಯ (Davanagere) ಆರ್‌ಎಂಸಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ.

ಬಾಲಕಿ ಹಾಗೂ ಆಕೆಯ ಜೊತೆಗಿದ್ದ ಅಪ್ರಾಪ್ತ ಬಾಲಕ ಸೇರಿ ದಾವಣಗೆರೆ ಬಸ್‌ ನಿಲ್ದಾಣದಿಂದ ಆಟೋದಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ, ಆಟೋ ಚಾಲಕ ಹಾಗೂ ಆತನ ಜೊತೆಗಿದ್ದ ಮತ್ತೊಬ್ಬ ಯುವಕ ಸೇರಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕನ ಮೇಲೆ ಹಲ್ಲೆ ನಡೆಸಿ, ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 2 ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಡ್ರಾಪ್ ಕೊಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರು ಅರೆಸ್ಟ್

ದೌರ್ಜನ್ಯ ಎಸಗಿದ ಬಳಿಕ ಬಾಲಕಿಯ ಬಳಿ ಇದ್ದ ಮೊಬೈಲ್ ಹಾಗೂ ಹಣವನ್ನು ಕಾಮುಕರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು. ಬಾಲಕಿ ದೂರು ನೀಡುತ್ತಿದ್ದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

Share This Article