Heart Attack | ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

Public TV
1 Min Read

ಮೈಸೂರು/ಕೊಡಗು: ರಾಜ್ಯದಲ್ಲಿ ಹೃದಯಾಘಾತದಿಂದ (Heart Attack) ಸರಣಿ ಸಾವು ಮುಂದುವರಿದಿದೆ. ಹಿರಿಯ ಜೀವಗಳು, ಎಳೇ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಮೈಸೂರಿನಲ್ಲಿ (Mysuru) 28 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ರೆ, ಕೊಡಗಿನಲ್ಲಿ (Kodagu) 58 ವರ್ಷದ ಮಹಿಳೆ ಜೀವ ತೆತ್ತಿದ್ದಾರೆ.

ಮೈಸೂರು:
ಇಲ್ಲಿನ ಚಾಮರಾಜ ಮೊಹಲ್ಲಾದ ನಿವಾಸಿ ದರ್ಶನ್‌ ಚೌದ್ರಿ (28) ಮೃತ ದುರ್ದೈವಿ. ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ ದರ್ಶನ್‌ಗೆ ನಿನ್ನೆ ರಾತ್ರಿ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಚಿಕಿತ್ಸೆ ನೀಡುವುದಕ್ಕೂ ಮನ್ನವೇ ದರ್ಶನ್‌ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

ಕೊಡಗು:
ಇನ್ನೂ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನಲ್ಲಿ 58 ವರ್ಷದ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಮಾ ಮೃತ ದುರ್ದೈವಿ. ನಿನ್ನೆ ಬೆಳಗ್ಗೆ ಮಹಿಳೆ ಸಾವನ್ನಪ್ಪಿದ್ದು, 2 ಗಂಡು ಮಕ್ಕಳು ಮತ್ತು ಪತಿಯನ್ನು ಅಗಲಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್

Share This Article