ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.
ಮಂಜುನಾಥ್ (25), ಶಿವರಾಜ್ (29) ಮೃತ ದುರ್ದೈವಿಗಳು. ಇಲ್ಲಿನ ಮಾಗಡಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಮಹಾರಾಷ್ಟ್ರದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿದ ಎಡಿಜಿಪಿ ಅಲೋಕ್ ಕುಮಾರ್
ಮೃತರು ರಾಮನಗರ ಜಿಲ್ಲೆಯ ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಇವರು ಜುಪಿಟರ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ರೀತಿ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಬಳಿ ನವೆಂಬರ್ 7 ರಂದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಯೋಧರೊಬ್ಬರು ಮೃತಪಟ್ಟಿದ್ದರು. ಇದನ್ನೂ ಓದಿ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಜೀಪ್‌ನಿಂದ ಬಿದ್ದು ಸಾವು