ಕೋವಿಡ್ ಆತಂಕ – ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೊರೊನಾ ಪಾಸಿಟಿವ್

Public TV
1 Min Read

ಬೆಂಗಳೂರು: ಮಹಾಮಾರಿ ಕೊರೊನಾ(Corona) ರಾಜ್ಯಕ್ಕೆ ಮತ್ತೆ ವಕ್ಕರಿಸಿಕೊಂಡಿದ್ದು, ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೋವಿಡ್ ಪಾಸಿಟಿವ್ ಕಾಣಿಸಿದೆ.

ಮಲ್ಲೇಶ್ವರಂನ(Malleshwaram) 45 ವರ್ಷದ ವ್ಯಕ್ತಿಗೆ ಹಾಗೂ ರಾಜಾಜಿನಗರದ(Rajajinagara) 38 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಇವರಿಬ್ಬರಿಗೂ ಕೋವಿಡ್ ಕಾಣಸಿಕೊಂಡಿದ್ದು, ಇಬ್ಬರನ್ನು ಹೋಂ ಐಸೂಲೇಷನ್‌ನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: 3 ವರ್ಷಗಳ ಬಳಿಕ ಮತ್ತೆ ವಕ್ಕರಿಸಿದ ಕೊರೊನಾ – ದೇಶದ ಹಲವು ರಾಜ್ಯಗಳಲ್ಲಿ JN1 ಎಂಟ್ರಿ

ಬೆಂಗಳೂರಿನಲ್ಲಿ ವೈಟ್‌ಫೀಲ್ಡ್‌ನ(Whitefield) 84 ವರ್ಷದ ವೃದ್ಧ ಮೇ 17ರಂದು ಕೊರೊನಾಗೆ ಬಲಿಯಾಗಿದ್ದಾರೆ. ಮೇ 13ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು, ಕೊರೊನಾಗೆ ತುತ್ತಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಕೇಸ್ ಇವೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಒಟ್ಟು ಮೂರು ಜನ ಮಕ್ಕಳಿಗೆ ಕೋವಿಡ್ ಪಾಸಿಟಿವ್(Covid Positive) ಬಂದಿದೆ. ಸದ್ಯ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ

ಶನಿವಾರ ರಾಜ್ಯದಲ್ಲಿ 108 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಐವರಿಗೆ ಕೋವಿಡ್ ಬಂದಿದೆ. ಶನಿವಾರ ಬೆಂಗಳೂರಲ್ಲಿ 2, ಮೈಸೂರು 2 ಹಾಗೂ ವಿಜಯನಗರದಲ್ಲಿ ಒಂದು ಕೋವಿಡ್ ಕೇಸ್ ಪತ್ತೆಯಾಗಿತ್ತು.

Share This Article