ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ದುರ್ಮರಣ

1 Min Read

ರಾಮನಗರ: ಈಜಲು (Swimming) ತೆರಳಿದ್ದ ವಿದ್ಯಾರ್ಥಿಗಳಿಬ್ಬರು (Students) ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ (Kanakapura) ತಾಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ.

ತನುಷ್ (18), ಸಂತೋಷ್ (19) ಮೃತ ವಿದ್ಯಾರ್ಥಿಗಳು. ಬುಧವಾರ ಕಬ್ಬಾಳು ದೇವಾಲಯಕ್ಕೆ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ ಬಳಿಕ ಕಬ್ಬಾಳು ಕೆರೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದು, ಆತನನ್ನ ರಕ್ಷಣೆ ಮಾಡಲು ಹೋದ ಮತ್ತೋರ್ವ ವಿದ್ಯಾರ್ಥಿ ಕೂಡಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ: ಸಂಕ್ರಾಂತಿ ಹಬ್ಬದ ದಿನವೇ ಹೆಚ್‌ಡಿಕೆ ಘೋಷಣೆ

ಸ್ಥಳಕ್ಕೆ ಸಾತನೂರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರ್ಯಾಚರಣೆ ಬಳಿಕ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕನಕಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿ | ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಶಾರ್ಪ್‌ಶೂಟರ್ಸ್ ಅರೆಸ್ಟ್‌ -‌ ಓರ್ವನಿಗೆ ಗುಂಡೇಟು

Share This Article