ಸಾವರ್ಕರ್‌ಗೆ ಅವಮಾನ ಮಾಡಿದ್ರೆ ಮೈತ್ರಿಯಲ್ಲಿ ಬಿರುಕು – ರಾಹುಲ್‍ಗೆ ಉದ್ಧವ್ ನೇರ ಎಚ್ಚರಿಕೆ

Public TV
1 Min Read

ಮುಂಬೈ: ಸಾವರ್ಕರ್ ಅವರನ್ನು ಅವಮಾನಿಸದಂತೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಗೆ (Rahul Gandhi) ಶಿವಸೇನೆ (Shiv Sena) (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಉಂಟಾಗಲಿದೆ ಎಂದಿದ್ದಾರೆ.

ಹಿಂದುತ್ವ (Hindutva) ಸಿದ್ಧಾಂತವಾದಿ ವಿಡಿ ಸಾವರ್ಕರ್ (V D Savarkar) ಅವರನ್ನು ಮಾದರಿಯಾಗಿ ಪರಿಗಣಿಸುತ್ತೇವೆ. ಅವರನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಡ್ಜಸ್ಟ್‌ಮೆಂಟ್‌ ಪಾಲಿಟಿಕ್ಸ್‌ ಬೇಡ – ಬೆಂಗಳೂರಿನಲ್ಲಿ ಗೆಲ್ಲೋ ಕ್ಷೇತ್ರಗಳ ಟಾರ್ಗೆಟ್‍ಗೆ ಶಾ ಸೂತ್ರ

ಸಾವರ್ಕರ್ ಅಂಡಮಾನ್ ಜೈಲಿನಲ್ಲಿ (Andaman cellular jail) 14 ವರ್ಷಗಳ ಕಾಲ ಸೆರೆವಾಸದಲ್ಲಿ ಚಿತ್ರಹಿಂಸೆ ಅನುಭವಿಸಿದ್ದನ್ನು ನಾವು ಓದಬಹುದು. ಇದು ಅವರ ತ್ಯಾಗಕ್ಕೆ ಇದ್ದ ಸಾಕ್ಷಿಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ಹಾಗೂ ಎನ್‍ಸಿಪಿ ಮೈತ್ರಿ ಪ್ರಜಾಪ್ರಭುತ್ವ ರಕ್ಷಣೆಗಾಗಿ ಮಾಡಲ್ಪಟ್ಟಿದೆ. ರಾಹುಲ್ ಅವರನ್ನು ಅನಗತ್ಯ ಪ್ರಚೋದಿಸಲಾಗುತ್ತಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಮೈತ್ರಿ ಮುಂದುವರೆಯಬೇಕು ಎಂದಿದ್ದಾರೆ.

ಪ್ರಧಾನಿ ವಿರುದ್ಧದ ರಾಹುಲ್ ಗಾಂಧಿ ಟೀಕೆಗೆ ಬಿಜೆಪಿ ನಿಲುವನ್ನು ತೀವ್ರವಾಗಿ ಖಂಡಿಸಿರುವ ಅವರು ಮೋದಿ ಎಂದರೆ ಭಾರತವಲ್ಲ. ಮೋದಿಯನ್ನು ಪ್ರಶ್ನಿಸುವುದು ಭಾರತಕ್ಕೆ (India) ಮಾಡುವ ಅಪಮಾನವಲ್ಲ ಎಂದಿದ್ದಾರೆ.

ಮೋದಿ (Modi) ಉಪನಾಮ ಬಳಕೆಯ ಮಾನನಷ್ಟ ಮೊಕದ್ದಮೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಈ ವೇಳೆ ಸುದ್ದಿಗೋಷ್ಠಿ ಕ್ಷಮೆಯನ್ನು ಯಾಕೆ ಕೇಳಿಲ್ಲ ಎಂಬ ಪ್ರಶ್ನೆಗೆ ಕ್ಷಮೆಯಾಚಿಸಲು ನಾನು ಸಾವರ್ಕರ್ ಅಲ್ಲ. ನಾನು ಗಾಂಧಿ ಕುಟುಂಬದವನು. ಗಾಂಧಿ ಕ್ಷಮೆ ಯಾಚಿಸುವುದಿಲ್ಲ ಎಂದು ಉತ್ತರಿಸಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ

Share This Article
Leave a Comment

Leave a Reply

Your email address will not be published. Required fields are marked *