ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ

Public TV
1 Min Read

ಉಡುಪಿ: ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಉಡುಪಿಯ ಅಕ್ಷತಾ ಪೂಜಾರಿ ಬೋಳ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹಲವು ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ಬಾರಿಯ ಏಕಲವ್ಯ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್‍ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ

ಅಕ್ಷತಾ ಅವರು ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲೂ 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಏಕಾಂಗಿಯಾಗಿ ಬಾವಿ ತೋಡಿದ್ದ ಅಕ್ಷತಾ
ಮಹಾಮಾರಿ ಕೊರೊನಾ ಬಂದ ಸಂದರ್ಭದಲ್ಲಿ ಇಡೀ ದೇಶ ಸ್ತಬ್ಧವಾಗಿತ್ತು. ಈ ಸಂದರ್ಭ ಜನ ಮನೆಯಿಂದಲೇ ಹೊರಗೆ ಬರುತ್ತಿರಲಿಲ್ಲ. ಆಗ ಅಕ್ಷತಾ ಪೂಜಾರಿ ಏಕಾಂಗಿಯಾಗಿ ತನ್ನ ಮನೆಯಲ್ಲಿ ಬಾವಿಯನ್ನು ತೋಡಿ ಸಾಧನೆ ಮಾಡಿದ್ದರು. ಇದನ್ನೂ ಓದಿ: 75 ಲಕ್ಷ ಲಂಚ ಕೊಟ್ಟಿದ್ದೇನೆ, ಬ್ಲೂಟೂತ್‍ನಲ್ಲಿ ಪರೀಕ್ಷೆ ಬರೆದಿದ್ದೇನೆ – ತನಿಖೆಗೆ ಡಿಜಿಗೆ ಪತ್ರ ಬರೆದ ಅಭ್ಯರ್ಥಿ

Share This Article
Leave a Comment

Leave a Reply

Your email address will not be published. Required fields are marked *