ಉಡುಪಿ ವೀಡಿಯೋ ಪ್ರಕರಣ – SITಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ

Public TV
1 Min Read

ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ (Udupi College) ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್‌ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ಮಾಡುತ್ತಿದ್ದು, ಪ್ರಕರಣವನ್ನು ಎಸ್‌ಐಟಿಗೆ (SIT) ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಮಂಗಳವಾರ ಮಂಗಳೂರಿನಲ್ಲಿ (Mangaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮೆರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಕ್ಕಳಾಟಿಕೆಯಾಗಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ? ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಅವರು ಹೇಳಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಪ್ರವಾಸ

ಪ್ರಗತಿ ಪರಿಶೀಲನೆ:
ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್‌ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸೌಜನ್ಯ ಕೇಸ್ ಬಗ್ಗೆ ಮಾತನಾಡುತ್ತಾ, ಅದನ್ನು ಸಿಬಿಐಗೆ ಕೊಡಲಾಗಿದ್ದು, ಕೋರ್ಟ್‌ನಲ್ಲಿ ಇತ್ತು. ಅವರ ಪೋಷಕರು ಮರು ತನಿಖೆಗೆ ಮನವಿ ಮಾಡಿದ್ದಾರೆ. ಕಾನೂನು ಪ್ರಕಾರ ಏನಾಗಬೇಕು ಎಂಬುದನ್ನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾನು ಲಾಯರ್ ಆಗಿ ಹೇಳೋದಾದ್ರೆ ಇದರ ಬಗ್ಗೆ ಹೈಕೋರ್ಟ್‌ಗೆ ಮನವಿ ಹೋಗಬೇಕು. ನಾನು ಸಿಬಿಐ ಕೋರ್ಟ್ ಜಡ್ಜ್‌ಮೆಂಟ್ ನೋಡಿಲ್ಲ. ಅದರ ಜಡ್ಜ್‌ಮೆಂಟ್ ಓದಿ ನೋಡುತ್ತೇನೆ. ಅಪೀಲ್‌ಗೆ ಅವಕಾಶ ಇದ್ಯಾ ನೋಡುತ್ತೇನೆ ಎಂದರು. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್