ಯುಜಿಸಿಇಟಿ- 2024; CBSE/CISCE/IGCSE ತೇರ್ಗಡೆಯಾದವರಿಗೆ ಅಂಕ ದಾಖಲಿಸಲು ಮೇ 20ರವರೆಗೆ ಅವಕಾಶ

Public TV
1 Min Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 12ನೇ ತರಗತಿಯನ್ನು ಸಿಬಿಎಸ್‌ಇ, (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ) ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡ್‌ಗಳಲ್ಲಿ 2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಮೇ 14ರಿಂದ 20ರವರೆಗೆ ಆನ್‌ಲೈನ್ ಪೋರ್ಟಲ್ ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ.

ಈ ಮೇಲೆ ತಿಳಿಸಿದ ಎಲ್ಲಾ ಅಭ್ಯರ್ಥಿಗಳು ಮೇ 20ರ ಒಳಗೆ ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ನಿಗದಿತ ಲಿಂಕ್‌ನಲ್ಲಿ ಅಂಕಗಳನ್ನು ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್ ಪ್ರತಿಯನ್ನು ತಪ್ಪದೇ ಅಪ್‌ಲೋಡ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ಹೇಮಂತ್‌ ಸೊರೆನ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ

2024ಕ್ಕಿಂತ ಹಿಂದಿನ ವರ್ಷಗಳಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿಯನ್ನು ಉತ್ತೀರ್ಣರಾಗಿರುವವರೂ ಅಂಕಗಳನ್ನು ದಾಖಲಿಸಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮಾವಿಗೆ ಬಿಸಿಲಿನ ಶಾಪ – ಬರೋಬ್ಬರಿ 400 ಕೋಟಿ ಮೌಲ್ಯದ ಮಾವು ನಷ್ಟ

ಅರ್ಹತಾ ಕಂಡಿಕೆ Ckause-Y ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಸಹ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕು. ಕರ್ನಾಟಕ ದ್ವಿತೀಯ ಪಿಯುಸಿ 2024ರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024ರ ‘ನಾಟಾ’ ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಲು ಕೋರಿದೆ. ಇದನ್ನೂ ಓದಿ:  ಭದ್ರತಾ ಪಡೆಗಳಿಂದ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ

Share This Article