ಉಕ್ರೇನ್‍ನ 4 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

Public TV
1 Min Read

ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್‍ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ, ಮರಿಯುಪೋಲ್‍ನ ಜನರಿಗೆ ನಗರವನ್ನು ಬಿಟ್ಟು ತೆರಳಲು ಸೂಚಿಸಿದೆ.

ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿ 12ನೇ ದಿನಕ್ಕೆ ಕಾಲಿಟ್ಟಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30ನಂತರ ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದೆ.

ಫ್ರಾನ್ಸ್ ಅಧ್ಯಕ್ಷರ ಸೂಚನೆ ಮೇರೆಗೆ ಕದನ ವಿರಾಮ ಘೋಷಿಸಲಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕದನ ವಿರಾಮಕ್ಕೆ ವೈಯಕ್ತಿಕವಾಗಿ ಕೋರಿಕೆಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ನಗರಗಳಲ್ಲಿ ಕದನ ವಿರಾಮವನ್ನು ಘೋಷಿಸಿ, ನಾಗರಿಕರನ್ನು ತೆರಳುವಂತೆ ಸೂಚಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ಕನದ ವಿರಾಮದ ನಂತರದಲ್ಲಿ ಉಕ್ರೇನ್‍ನ ಈ 4 ನಗರಗಳಲ್ಲಿ ರಷ್ಯಾ ಭಾರೀ ದಾಳಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

ಈಗಾಗಲೇ ಉಕ್ರೇನ್‍ನ ಅಣು ವಿದ್ಯುತ್ ಸ್ಥಾವರಗಳ ಮೇಲೆ ರಷ್ಯಾ ದಾಳಿ ಮಾಡಿದ್ದು, ಅಣು ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಿಂದ ದೊಡ್ಡ ಪ್ರಮಾದ ಉಂಟಾಗಿದೆ. ಚೆರ್ನೋಬಿಲ್, ಝಫೋರಿಝೀಯಾ ಎರಡು ಸ್ಥಾವರಗಳನ್ನು ರಷ್ಯಾ ಕೈವಶ ಮಾಡಿಕೊಂಡಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧ – 14 ವರ್ಷದ ಬಳಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ

Share This Article
Leave a Comment

Leave a Reply

Your email address will not be published. Required fields are marked *