ಸಕ್ಕರೆ ಉದ್ಯಮಕ್ಕೆ ಉಮೇಶ್ ಕತ್ತಿ ಕೊಡುಗೆ ಮರೆಯುವಂತಿಲ್ಲ: ಡಿ.ಕೆ ಶಿವಕುಮಾರ್

Public TV
1 Min Read

ಬೆಂಗಳೂರು: ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ (Umesh Katti) ಯವರು ನೀಡಿದ ಕೊಡುಗೆ ಮರೆಯುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivakumar) ಹೇಳಿದ್ದಾರೆ.

ರಾಜ್ಯ ವಿಧಾನ ಸಭೆ (Vidhana Sabha) ಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ ಎಂದರು.

ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ- ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *