ನಿಲ್ಲದ ಮಳೆ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಶಾಲಾ ಕಾಲೇಜು ರಜೆ

Public TV
0 Min Read

– ಚಿಕ್ಕಮಗಳೂರಿನ 3 ತಾಲೂಕುಗಳಿಗೆ ರಜೆ ಘೋಷಣೆ

ಮಡಿಕೇರಿ/ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಎಲ್ಲೆಲ್ಲಿ ರಜೆ?
ಚಿಕ್ಕಮಗಳೂರಿನ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಲಾಗಿದ್ದು, ಎನ್.ಆರ್.ಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಪರಿಸ್ಥಿತಿ ಅನುಗುಣವಾಗಿ ರಜೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ಜುಲೈ 14ರವರೆಗೆ ರಜೆಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರು ಮಾಹಿತಿ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *