Union Budget: ಫೆ.1ರ ಭಾನುವಾರವೇ ಕೇಂದ್ರ ಬಜೆಟ್‌ ಮಂಡನೆ

1 Min Read

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ (Union Budget) ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಫೆಬ್ರವರಿ 1ರ ಭಾನುವಾರದಂದೇ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.

ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29 ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಮಂಡಿಸಲಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರ ಅಂಕಿತ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28 ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇದಕ್ಕೆ ಅನುಮೋದನೆ ನೀಡಿದ್ದಾರೆ. ರಾಷ್ಟ್ರಪತಿಗಳು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13 ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಹಂತವು ಮಾರ್ಚ್ 9 ರಂದು ಪ್ರಾರಂಭವಾಗಿ ಏಪ್ರಿಲ್ 2 ರವರೆಗೆ ಮುಂದುವರಿಯಲಿದೆ. ಇದನ್ನೂ ಓದಿ: ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

ಬಜೆಟ್ ಅಧಿವೇಶನದ ಬಿಡುವು ಇಲಾಖೆಗೆ ಸಂಬಂಧಿಸಿದ ಸ್ಥಾಯಿ ಸಮಿತಿಗಳಿಗೆ ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಅನುದಾನ ಬೇಡಿಕೆಗಳನ್ನು ಪರಿಶೀಲಿಸಲು ಸಹಾಯ ಮಾಡುತ್ತದೆ.

Share This Article