ದ.ಕ. ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಅನುಮೋದನೆ

Public TV
1 Min Read

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ (Karnataka) ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ (National Highway) ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ (Nalin Kumar Kateel) ತಿಳಿಸಿದ್ದಾರೆ.  ಇದನ್ನೂ ಓದಿ: ಅಯೋಧ್ಯೆ ಹೆಸರಿನಲ್ಲಿ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ: ಸ್ಯಾಮ್‌ ಪಿತ್ರೋಡಾ ಕಿಡಿ

 

ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ (Ujire-Dharmasthala-Periyashanthi) 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು (Mangaluru-Mudigere-Tumakuru) ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ. ಇದನ್ನೂ ಓದಿ: ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು – ಬಿಜೆಪಿ ಸಭೆಯ ನಿರ್ಣಯಗಳೇನು?

 

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ – ಮೈಸೂರು (Mani-Mysuru) ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1,000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರು ತಿಳಿಸಿದ್ದಾರೆ.

Share This Article