ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

Public TV
1 Min Read

ಬೆಂಗಳೂರು: ವಿಧಾನಸೌಧದ ಮುಂದೆ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಸಬೂಬಿಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ‌ಕಿಡಿಕಾರಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ನೀವೇನು ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ವಿಧಾನಸೌಧದ ಮೆಟ್ಟಿಲುಗಳಿಗೆ ಮುಖ್ಯಮಂತ್ರಿಗಳೋ ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

ಕುಮಾರಸ್ವಾಮಿ Xನಲ್ಲಿ ಏನಿದೆ?
ವಿಧಾನಸೌಧ ಮೆಟ್ಟಿಲು ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಮೆಟ್ಟಿಲು ಮುಖ್ಯಮಂತ್ರಿ ಅಂತ ವಾಗ್ದಾಳಿ ನಡೆಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವದ ದಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಬಲಿಯಾಗಿದ್ದರು. ಘಟನೆ ಸಂಬಂಧ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಈ ದುರಂತ ವಿಧಾನಸೌಧದಲ್ಲಿ ನಡೆದಿಲ್ಲ, ಕ್ರೀಡಾಂಗಣದಲ್ಲಿ ಸಂಭವಿಸಿದೆ ಎಂದು ಸಿಎಂ ತಿಳಿಸಿದ್ದರು. ದುರಂತಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂಬಂತೆ ಸಿಎಂ ಮಾತನಾಡಿದ್ದರು. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

Share This Article