ತಿರುಪತಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿ – ವೆಂಕಟರಮಣನಿಗೆ ವಿಶೇಷ ಪೂಜೆ

Public TV
1 Min Read

ಅಮರಾವತಿ: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಗುರುವಾರ ಬೆಳಗ್ಗೆ ತಿರುಪತಿಗೆ (Tirupati) ಭೇಟಿ ನೀಡಿ ವೆಂಕಟೇಶ್ವರ ದೇವರ ದರ್ಶನ ಪಡೆದಿದ್ದಾರೆ.

ತಿರುಪತಿಗೆ ಭೇಟಿ ನೀಡಿದ ಬಗ್ಗೆ ಮಾತನಾಡಿದ ಅವರು, ನಮ್ಮ ದೇಶದ ಜನರು ಸಂತೋಷ ಮತ್ತು ಸಮೃದ್ಧಿಯಾಗಿರಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಸ್ಫೂರ್ತಿ, ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳಿ ತಪ್ಪಿದ ರೈಲು – ಉತ್ತರ ಪ್ರದೇಶದಲ್ಲಿ ಭೀಕರ ದುರಂತಕ್ಕೆ ನಾಲ್ವರು ದುರ್ಮರಣ

ಇದಕ್ಕೂ ಮೊದಲು ಜೂ.30 ರಂದು ಶ್ರೀಲಂಕಾದ ನ್ಯಾಯ, ಜೈಲು ವ್ಯವಹಾರಗಳು ಮತ್ತು ಸಾಂವಿಧಾನಿಕ ಸುಧಾರಣೆಗಳ ಸಚಿವ ವಿಜಯದಾಸ ರಾಜಪಕ್ಷೆ ಅವರು ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು.

ಜೂ.15 ರಂದು ಕೇಂದ್ರ ಬೃಹತ್‌ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿರುಪತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಕೇಂದ್ರ ಸಚಿವನಾಗಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೆಚ್‌ಡಿಕೆ ತಿಳಿಸಿದ್ದರು. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

Share This Article