ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ

Public TV
1 Min Read

ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‍ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಕಿಡಿಕಾರಿದರು.

ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ರಾಹುಲ್ ಗಾಂಧಿ ಮಾಡಿದ್ದ ಟ್ವೀಟ್‍ಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರು ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುತ್ತಿರುವ ಕಾರ್ಯವನ್ನು ಜನರು ಮೆಚ್ಚುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಲ್ಲರೂ ಭಾರತದತ್ತ ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯ ನಡುವೆ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಮರಳಿ ತರಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ. ಅಸಹಾಯಕ ವಿದ್ಯಾರ್ಥಿಗಳ ಜೊತೆಗೆ ಇಂತಹ ನಾಚಿಕೆಗೇಡಿನ ವರ್ತನೆ ಇಡೀ ದೇಶಕ್ಕೆ ಮಾಡಿದ ಅವಮಾನ. ಆಪರೇಷನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರದ ನೈಜ ಮುಖವನ್ನು ತೆರೆದಿಟ್ಟಿದೆ ಎಂದು ಟೀಕಿಸಿದ್ದರು.

ರಷ್ಯಾ ಆಕ್ರಮಣದ ಹಿನ್ನೆಲೆಯಲ್ಲಿ ಉಕ್ರೇನ್ ವಾಯುಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್‍ನ ನೆರೆ ದೇಶಗಳಾದ ನಿಯಾ, ಹಂಗೆರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‍ನಿಂದ ಭಾರತೀಯರನ್ನು ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಡಲಾಗಿದೆ.

ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ರಕ್ಷಿಸಲು ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನಗಳು ಪ್ರಾರಂಭವಾದಾಗಿನಿಂದ 15,900ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ಕರೆತರಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

Share This Article
Leave a Comment

Leave a Reply

Your email address will not be published. Required fields are marked *