ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

Public TV
2 Min Read

– ಧಾರವಾಡದ 1.15 ಲಕ್ಷ ರೈತರ ಖಾತೆಗೆ 23.09 ಕೋಟಿ ರೂ. ಜಮೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ (PM Kisan Yojana) ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

ಕೇಂದ್ರ ಸರ್ಕಾರ (Union Government) ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6,000 ರೂ. ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ

ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ (Agriculture) ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ. ಅಲ್ಲದೇ ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯು ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ 20,000 ಕೋಟಿ ರೂ. ನೇರ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ 47.12 ಲಕ್ಷ ರೈತರು 942 ಕೋಟಿ ರೂ. ಪಡೆದಿದ್ದಾರೆ ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

ಧಾರವಾಡದ 1.15 ಲಕ್ಷ ರೈತರಿಗೆ ಸಮ್ಮಾನ್ ನಿಧಿ:
ಧಾರವಾಡ ಲೋಕಸಭಾ ಕ್ಷೇತ್ರದ 1.15 ಲಕ್ಷ ರೈತರು ಇದರ ಪ್ರಯೋಜನ ಪಡೆದಿದ್ದಾರೆ. 23.09 ಕೋಟಿ ರೂ. ಧಾರವಾಡ ರೈತರ ಖಾತೆಗೆ ಜಮೆಯಾಗಿದ್ದು, ದಸರಾ ಹಬ್ಬದ ವೇಳೆ ರೈತರಲ್ಲಿ ಖುಷಿ ತಂದಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

Share This Article