ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

– ದಾವೋಸ್‌ನ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯ ಸ್ವಾಗತ

ದಾವೋಸ್: ಹೊಸ ವರ್ಷದ ಹೊಸತರಲ್ಲಿ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ (WEF) ಸಭೆಗೆ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತೆರಳಿದ್ದಾರೆ.

WEFನ 2026ರ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರೂ ಆಗಿರುವ ಜೋಶಿ ಅವರಿಗೆ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು.

ಭಾರತದಲ್ಲಿನ ಆಹಾರ ವ್ಯವಸ್ಥೆ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನಮ್ಮ ಕ್ರಾಂತಿ, ಆಡಳಿತ ಸುಧಾರಣೆ ಹಾಗೂ ಕಾರ್ಯವೈಖರಿಯು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ ಎಂಬುದರ ಸಂಕೇತ ಇದಾಗಿದೆ. ಅಲ್ಲದೇ, ಹೆಚ್ಚಿನ ಹೂಡಿಕೆಯನ್ನು ಸೆಳೆಯಲು ಅವಕಾಶವಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಇದೇ ವೇಳೆ ಪ್ರತಿಕ್ರಿಯಿಸಿದ್ದಾರೆ.

Share This Article