ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

Public TV
2 Min Read

ನವದೆಹಲಿ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿದ್ದು, ಬಿಸಿ ಬಿಸಿ ಚರ್ಚೆಯಲ್ಲಿದೆ. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ.

ಸೋಶಿಯಲ್‌ ಮೀಡಿಯಾ ಬಳಕೆದಾರರೊಬ್ಬರು ಮೂಲ ವೀಡಿಯೋವನ್ನ ಪತ್ತೆ ಮಾಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವಾಸ್ತವಾಂಶ ಬಯಲಾದ ಬಳಿಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrasekha) ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ದೇಶದ ಐಟಿ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವೀಡಿಯೋ ಮತ್ತು ಇತರ ವಿಷಯಗಳನ್ನು ತೆಗೆದುಹಾಕುವಂತೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಇದರೊಂದಿಗೆ ತಮ್ಮ ಪೋಸ್ಟ್‌ನಲ್ಲಿ, ಯಾವುದೇ ವೇದಿಕೆಯಲ್ಲಿ ತಪ್ಪು ಮಾಹಿತಿ ಪೋಸ್ಟ್‌ ಮಾಡಿದ್ರೆ, ಅದನ್ನ 36 ಗಂಟೆಗಳ ಒಳಗೆ ತೆಗೆದುಹಾಕಬೇಕು. ಇಲ್ಲದಿದ್ದರೇ ನೊಂದ ವ್ಯಕ್ತಿ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ: ಅಮಿತಾಭ್ ಕಿಡಿಕಿಡಿ

ನರೇಂದ್ರ ಮೋದಿಜೀ ಅವರ ಸರ್ಕಾರವೂ ಇಂಟರ್ನೆಟ್‌ ಬಳಸುವ ಎಲ್ಲಾ ಡಿಜಿಟಲ್‌ ನಾಗರಿಕೆ ಸುರಕ್ಷತೆ ಮತ್ತು ನಂಬಿಕೆ ಉಳಿಸಿಕೊಳ್ಳಲು ಬದ್ಧವಾಗಿದೆ. ಏಪ್ರಿಲ್, 2023 ರಲ್ಲಿ ಸೂಚಿಸಲಾದ ಐಟಿ ನಿಯಮಗಳ ಅಡಿಯಲ್ಲಿ – ಇದು ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಾಗಿದೆ. ಯಾವುದೇ ಬಳಕೆದಾರರು ಮತ್ತು ಪ್ಲಾಟ್‌ಫಾರ್ಮ್‌ಗಳು ಇದನ್ನು ಅನುಸರಿಸದಿದ್ದರೆ 36 ಗಂಟೆಗಳಲ್ಲಿ ತಪ್ಪು ಮಾಹಿತಿಗಳನ್ನು ತೆಗೆದುಹಾಕಬೇಕಾಗುತ್ತದೆ. ಇಲ್ಲದಿದ್ದಲ್ಲಿ ಇದು ಐಟಿ ನಿಯಮ 7ರ (IT rules Seven) ಅಡಿಯಲ್ಲಿ ಕಾನೂನು ಉಲ್ಲಂಘನೆಯಾಗಲಿದ್ದು, ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯಿಂದ ವೇದಿಕೆಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿದ್ದಾರೆ. ಇಂತಹ ಹಾನಿಕಾರಕ ತಪ್ಪು ಮಾಹಿತಿಗಳನ್ನು ವೇದಿಕೆಗಳ ಮೂಲಕ ವ್ಯವಹರಿಸಬೇಕು ಎಂದೂ ಹೇಳಿದ್ದಾರೆ. ಇದನ್ನೂ ಓದಿ: Bigg Boss: ತನಿಷಾ, ವರ್ತೂರು ಸಮ್‌ಥಿಂಗ್‌ ಸಮ್‌ಥಿಂಗ್‌ ಬಗ್ಗೆ ಸುದೀಪ್‌ ರಿಯಾಕ್ಷನ್

ಏನಿದು ವೈರಲ್‌ ವೀಡಿಯೋ ಸ್ಟೋರಿ?
ರಶ್ಮಿಕಾ ಮಂದಣ್ಣ ಅವರದ್ದು ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯೋ ಅಥವಾ ನಕಲಿಯೋ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿದ್ದರು. ಕಿಡಿಗೇಡಿಗಳು ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾರ್ಫಿಂಗ್‌ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

Share This Article