ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ – ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

By
2 Min Read

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಅಭಾವ (Power Shortage) ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಸದ್ದಿಲ್ಲದೇ ಅನಧಿಕೃತ ಲೋಡ್‌ಶೆಡ್ಡಿಂಗ್ (Load Shedding) ಜಾರಿ ಮಾಡಿದೆ. ವಿದ್ಯುತ್ ಅಭಾವದ ನಡುವೆಯೂ ಎಲ್ಲಾ ಎಸ್ಕಾಂಗಳು ಕೈಗಾರಿಕಾ ವಲಯಕ್ಕೆ ಆದ್ಯತೆ ನೀಡಿದ್ದು ಕೃಷಿಕರನ್ನು ಸಂಪೂರ್ಣ ಕಡೆಗಣಿಸಿದೆ. ಗ್ರಾಮೀಣ ಭಾಗ ಮಾತ್ರವಲ್ಲದೇ ನಗರ ಪ್ರದೇಶಗಳಲ್ಲಿಯೂ ಲೋಡ್‌ಶೆಡ್ಡಿಂಗ್ ಆರಂಭವಾಗಿದೆ.

ಲೋಡ್‌ಶೆಡ್ಡಿಂಗ್ ವಿರುದ್ಧ ರಾಜ್ಯದ ರೈತರು (Farmers) ಸಿಡಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾಸನ, ಚಾಮರಾಜನಗರ, ಬೆಳಗಾವಿಯ ಚಿಕ್ಕೋಡಿ ಸೇರಿ ಹಲವೆಡೆ ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ನಮಗೆ ಉಚಿತ ವಿದ್ಯುತ್‌ (Free Electricity) ಬೇಡ. ಬೆಳೆ ಉಳಿಸಿಕೊಳ್ಳಲು ವಿದ್ಯುತ್‌ ನೀಡಿ ಎಂದು ಆಗ್ರಹಿಸಿದ್ದಾರೆ. ಇದಕ್ಕೆ ವಿಪಕ್ಷ ಬಿಜೆಪಿಯೂ (BJP) ಸಾಥ್ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ ನಾಯಕರು ಎತ್ತಿನಗಾಡಿಯಲ್ಲಿ ಸಂಚರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಲೀಡ್‌ ಕೊಟ್ಟ ಕ್ಷೇತ್ರದಲ್ಲಿ ಮಾತ್ರ ಕೆಲಸ : ಮಾಗಡಿ ಶಾಸಕ ಬಾಲಕೃಷ್ಣ

ತೀವ್ರ ವಿದ್ಯುತ್ ಸಮಸ್ಯೆ ಇರುವುದನ್ನು ಇಂಧನ ಇಲಾಖೆ (Energy Department) ಒಪ್ಪಿಕೊಂಡಿದ್ದು, ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬಹಿರಂಗಮಾಡಿದೆ.

 

ಇಂಧನ ಇಲಾಖೆ ಹೇಳಿದ್ದೇನು?
ಮುಂಗಾರು ಕೊರತೆಯಿಂದ ತೀವ್ರ ವಿದ್ಯುತ್ ಸಮಸ್ಯೆಯಾಗಿದ್ದು ಪವನ ವಿದ್ಯುತ್, ಸೋಲಾರ್, ಜಲ ವಿದ್ಯುತ್, ಉಷ್ಣಸ್ಥಾವರಗಳಲ್ಲಿ ಉತ್ಪಾದನೆ ಕುಂಠಿತವಾಗಿದೆ. ಪ್ರಸ್ತುತ ನಿತ್ಯ 15 ಸಾವಿರ ಮೆಗಾವ್ಯಾಟ್ ವಿದ್ಯುತ್‌ಗೆ ಬೇಡಿಕೆ ಇದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 9,032 ಮೆಗಾವ್ಯಾಟ್‌ಗೆ ಬೇಡಿಕೆ ಇತ್ತು.

ರಾಜ್ಯದಲ್ಲಿ ನಿತ್ಯ 10 ಸಾವಿರ ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದ್ದು ಕೇಂದ್ರ ಮತ್ತು ಹೊರ ರಾಜ್ಯಗಳಿಂದ 3 ಸಾವಿರ ಮೆಗಾವ್ಯಾಟ್ ಪೂರೈಕೆ ಆಗುತ್ತಿದೆ. ನಿತ್ಯ 2 ಸಾವಿರ ಮೆಗಾವ್ಯಾಟ್‌ನಷ್ಟು ವಿದ್ಯುತ್ ಕೊರತೆಯಿದೆ. ಅಲ್ಪಾವದಿಯ ಟೆಂಡರ್ ಮೂಲಕ ವಿದ್ಯುತ್ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಪ್ರತಿ ಜಿಲ್ಲೆಗೂ ನೋಡಲ್ ಅಧಿಕಾರಿ ಮೂಲಕ ವಿದ್ಯುತ್ ಹಂಚಿಕೆಗೆ ಚಿಂತನೆ ನಡೆದಿದೆ.

ವಿದ್ಯುತ್ ಬಳಕೆ ಅಂಕಿ ಅಂಶ
* ಒಟ್ಟು ಗೃಹ ಬಳಕೆದಾರರ ಸಂಖ್ಯೆ – 2 ಕೋಟಿ
* ಉಚಿತ ವಿದ್ಯುತ್ ಫಲಾನುಭವಿಗಳು – 1.50 ಕೋಟಿ
* ಕೃಷಿ ಪಂಪ್‌ಸೆಟ್ ಸಂಖ್ಯೆ – 32 ಲಕ್ಷ
* ಬೃಹತ್ ಕೈಗಾರಿಕೆಗಳ ಸಂಖ್ಯೆ – 15,147
* ಸಣ್ಣ ಕೈಗಾರಿಕೆಗಳ ಸಂಖ್ಯೆ – 5.35 ಲಕ್ಷ
* 1.50 ಲಕ್ಷ ಹೊಸ ಪಂಪ್‌ಸೆಟ್‌ಗೆ ಸಂಪರ್ಕ ಸಿಕ್ಕಿಲ್ಲ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್