ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
1 Min Read

ಲಕ್ನೋ: ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ (Lucknow) ನಡೆದಿದೆ.

ಪೊಲೀಸ್ ಕಾನ್‌ಸ್ಟೇಬಲ್ ಅನುರಾಗ್ ಸಿಂಗ್ ಅವರ ಪತ್ನಿ ಸೌಮ್ಯ ಕಶ್ಯಪ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಇದನ್ನೂ ಓದಿ: ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

ಮೂಲಗಳ ಪ್ರಕಾರ, ಬಕ್ಷಿ ಕಾ ತಲಾಬ್ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ವೊಬ್ಬರು ಇನ್‌ಸ್ಟಾದಲ್ಲಿ ವಿಡಿಯೋ ರೀಲ್ಸ್ ನೋಡುವಾಗ ಮೃತ ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ಹರಿಬಿಟ್ಟ ವಿಡಿಯೋ ಗಮನಿಸಿದ್ದಾರೆ. ನಂತರ ಪ್ರಕರಣ ಬೆಳಕಿಗೆ ಬಂದಿದೆ.

ವಿಡಿಯೋದಲ್ಲಿ, ಅತ್ತೆ, ಮಾವ ಹಾಗೂ ಮೈದುನ ಮೂವರು ಸೇರಿ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಗಂಡನನ್ನು ನನ್ನಿಂದ ಬೇರ್ಪಡಿಸಿ, ಅವರಿಗೆ ಬೇರೆ ಮದುವೆ ಮಾಡಲು ಬಯಸುತ್ತಿದ್ದಾರೆ. ಅದೇ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಜೊತೆಗೆ ಮೈದುನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಉತ್ತರ ಲಕ್ನೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿ ಜಿತೇಂದ್ರ ದುಬೆ ಅವರು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Share This Article