UP Election-  30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Public TV
1 Min Read

ನವದೆಹಲಿ: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಪಕ್ಷಗಳು ತಮ್ಮ ಪಕ್ಷದ ಪರ ಪ್ರಚಾರಕ್ಕರ ಭರ್ಜರಿ ಸಿದ್ಧತೆ ನಡೆಸಿವೆ. ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ತನ್ನ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೊದಲ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ 30 ನಾಯಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಂಸದೆ ಹೇಮಾ ಮಾಲಿನಿ ಸೇರಿ ಹಲವು ನಾಯಕರು ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಒಟ್ಟು 30 ಜನರ ಹೆಸರು ಇರುವ ಪಟ್ಟಿಯನ್ನು ಬಿಜೆಪಿ ನಾಯಕರು ಸಿದ್ಧ ಪಡಿಸಿದ್ದಾರೆ. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಒಳಪಡುವ ಐದು ರಾಜ್ಯಗಳಲ್ಲಿ  ರ‍್ಯಾಲಿಗಳು ಮತ್ತು ರೋಡ್‍ಶೋಗಳ ಮೇಲೆ ನಡೆಯುತ್ತಿರುವ ನಿಷೇಧದ ನಡುವೆ, ಈ ರಾಜ್ಯಗಳಲ್ಲಿ ಬಿಜೆಪಿ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಹೆಚ್ಚಿನ ಜನರನ್ನು ತಲುಪುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಕಿಡ್ನಾಪ್ ಕಥೆ ಕಟ್ಟಿ ತಂದೆಗೆ 30 ಲಕ್ಷ ರೂ.ಗೆ ಬೇಡಿಕೆ ಇಟ್ಟ ಮಗ

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಯುಪಿಯಲ್ಲಿ ಬಿಜೆಪಿ ಗೆದ್ರೆ, ಯೋಗಿ ಮತ್ತೊಮ್ಮೆ ಸಿಎಂ ಆದ್ರೆ ಸೃಷ್ಟಿಯಾಗಲಿದೆ ಹೊಸ ನಾಲ್ಕು ದಾಖಲೆಗಳು!

Share This Article
Leave a Comment

Leave a Reply

Your email address will not be published. Required fields are marked *