2ನೇ ಕಿಮ್‌ ಜಾಂಗ್‌ ಬೇಕೇ ಅಂತ ಜನ ಯೋಚಿಸಬೇಕು: ಮೋದಿ ವಿರುದ್ಧ ರೈತ ನಾಯಕ ಆಕ್ರೋಶ

Public TV
1 Min Read

ಲಕ್ನೋ: ಉತ್ತರ ಪ್ರದೇಶ ಚುನಾವಣೆ ಮಧ್ಯದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ರೈತ ನಾಯಕ ರಾಕೇಶ್‌ ಟಿಕಾಯತ್‌ ವಾಗ್ದಾಳಿ ನಡೆಸಿದ್ದಾರೆ. ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿ ರೈತರ ಆಕ್ರೋಶಕ್ಕೆ ಗುರಿಯಾಗಿದ್ದ ಬಿಜೆಪಿ ವಿರುದ್ಧ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಜನಸಾಮಾನ್ಯರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಮತ್ತು ಪ್ರಧಾನಿ, ಎರಡನೇ ಕಿಮ್‌ ಜಾಂಗ್‌ ಉನ್‌ (ಉತ್ತರ ಕೊರಿಯಾ ಅಧ್ಯಕ್ಷ) ಆಗಿರಬೇಕೇ ಎಂಬುದನ್ನು ಜನರೇ ತೀರ್ಮಾನಿಸಬೇಕು. ನಮಗೆ ಯಾವುದೇ ರಾಜ್ಯದಲ್ಲಿ ಸರ್ವಾಧಿಕಾರಿ ಸರ್ಕಾರ ಬೇಡ. ನಾವು ಜನರಲ್ಲಿ ಮನವಿ ಮಾಡುತ್ತೇವೆ. ಜನರು ತಮ್ಮ ಮತಗಳನ್ನು ಬುದ್ಧವಂತಿಕೆಯಿಂದ ಬಳಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

ಮುಜಾಫರ್‌ನಗರದಲ್ಲಿ ಬಿಜೆಪಿ ಧ್ರುವೀಕರಣ ಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಇದು ಹಿಂದೂ-ಮುಸ್ಲಿಂ ಮೆರವಣಿಗೆಗಳ ಕ್ರೀಡಾಂಗಣವಲ್ಲ. ಪಶ್ಚಿಮ ಉತ್ತರ ಪ್ರದೇಶವು ಅಭಿವೃದ್ಧಿಯನ್ನು ಬಯಸುತ್ತದೆ. ಹಿಂದೂ, ಮುಸ್ಲಿಂ, ಜಿನ್ನಾ, ಧರ್ಮದ ಬಗ್ಗೆ ಮಾತನಾಡುವವರು ಮತಗಳನ್ನು ಕಳೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಮತದಾರರು ರೈತರ ವಿರುದ್ಧ ಅಲ್ಲದವರಿಗೆ ಒಲವು ತೋರುತ್ತಾರೆ ಎಂದು ನಾನು ಭವಿಸುತ್ತೇನೆ. ಹಿಂದೂ ಮತ್ತು ಮುಸ್ಲಿಂ ಮತದಾರರನ್ನು ಧ್ರುವೀಕರಿಸದವರಿಗೆ ಅವರು ಬೆಂಬಲ ನೀಡುತ್ತಾರೆ. ಪಾಕಿಸ್ತಾನ ಮತ್ತು ಜಿನ್ನಾ ಬಗ್ಗೆ ಅಲ್ಲ, ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವವರಿಗೆ ಜನರು ಒಲವು ತೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸೋದರಳಿಯನ ಮಗಳಿಗೆ ಸುಷ್ಮಾ ಸ್ವರಾಜ್‌ ಹೆಸರು ನಾಮಕರಣ

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿ ಭಾಗಗಳಲ್ಲಿ ವಿವಿಧ ರೈತ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ್ದವು. ವ್ಯಾಪಕ ಪ್ರತಿರೋಧದ ನಡುವೆ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿತು.

Share This Article
Leave a Comment

Leave a Reply

Your email address will not be published. Required fields are marked *