ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ

By
2 Min Read

ಲಕ್ನೋ: 2017ರ ಚುನಾವಣೆಯಲ್ಲಿ(Election) ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉತ್ತರ ಪ್ರದೇಶದ(Uttar Pradesh) ಸಚಿವ ಮಾಯಂಕೇಶ್ವರ್ ಶರಣ್ ಸಿಂಗ್(Mayankeshwar Sharan Singh) ಅವರು ಶನಿವಾರ ಸುಲ್ತಾನ್‌ಪುರದ ನ್ಯಾಯಾಲಯಕ್ಕೆ ಹಾಜರಾಗಿ 500 ರೂ. ದಂಡವನ್ನು ನೀಡಿದ್ದಾರೆ. ಬಳಿಕ ಹೈಕೋರ್ಟ್(High Court) ಅವರ ವಿರುದ್ಧದ ವಿಚಾರಣೆಯನ್ನು ಕೊನೆಗೊಳಿಸಿದೆ.

ತಿಲೋಯ್ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿರುವ ಆರೋಗ್ಯ ಖಾತೆಯ ರಾಜ್ಯ ಸಚಿವ ಶರಣ್ ಸಿಂಗ್ ಅವರು, ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (3) ಸೈಮಾ ಸಿದ್ದಿಕಿ ಜರಾರ್ ಆಲಂ ಅವರ ನ್ಯಾಯಾಲಯಕ್ಕೆ ಹಾಜರಾದರು.

ಶರಣ್ ಸಿಂಗ್ ಅವರು ದಂಡದ ಮೊತ್ತವನ್ನು ಠೇವಣಿ ಮಾಡಿ, ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಸ್ವೀಕರಿಸಿದ್ದು, ಅವರ ಪ್ರಕರಣದ ವಿಚಾರಣೆಯನ್ನು ಕೊನೆಗೊಳಿಸುವಂತೆ ಆದೇಶ ನೀಡಿದೆ. ಇದನ್ನೂ ಓದಿ: ಎಲಿಜಬೆತ್-II ಅಂತ್ಯಕ್ರಿಯೆ ಹಿನ್ನೆಲೆ ಬ್ರಿಟನ್‍ಗೆ ತೆರಳಿದ ದ್ರೌಪದಿ ಮುರ್ಮು

ಘಟನೆಯೇನು?
2017ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಮೇಥಿ ಜಿಲ್ಲೆಯ ಗೌರಿಗಂಜ್ ಕೊಟ್ವಾಲಿ ಪ್ರದೇಶದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶರಣ್ ಸಿಂಗ್ ಹಾಗೂ ಅವರ 150 ಅಪರಿಚಿತ ಬೆಂಬಲಿಗರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆಯ ವೇಳೆ ಅವರ ಬೆಂಬಲಿಗರನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ ಪೊಲೀಸರು ಶರಣ್ ಸಿಂಗ್ ವಿರುದ್ಧ ಮಾತ್ರವೇ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

2019ರ ಮಾರ್ಚ್ 18 ರಂದು ಸಲ್ಲಿಸಲಾದ ಚಾರ್ಜ್‌ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್(3) ಅವರನ್ನು ಕರೆಸಿದ್ದರು. ಬಳಿಕ ಶರಣ್ ಸಿಂಗ್, ನ್ಯಾಯಾಲಯ ನೀಡಿದ ಆದೇಶ ಹಾಗೂ ಪೊಲೀಸರ ಆರೋಪಪಟ್ಟಿಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಮ್ಸ್ ದುರಂತ: ಇಂದು ಸಚಿವ ಸುಧಾಕರ್ ಭೇಟಿ – ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎಂದ ಶ್ರೀರಾಮುಲು

ಇದಾದ ಬಳಿಕ ಹೈಕೋರ್ಟ್ ದಂಡವನ್ನು ಠೇವಣಿ ಮಾಡಿದ ಬಳಿಕ ವಿಚಾರಣೆಯನ್ನು ಕೊನೆಗೊಳಿಸುವಂತೆ ಸಂಬಂಧಪಟ್ಟ ನ್ಯಾಯಾಲಯಕ್ಕೆ ಸೂಚಿಸಿದೆ. ಈ ಆದೇಶಕ್ಕೆ ಅನುಸಾರವಾಗಿ, ಶರಣ್ ಸಿಂಗ್ ಅವರು ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿ, ಅಲ್ಲಿ 500 ರೂ. ದಂಡವನ್ನು ಠೇವಣಿ ಮಾಡಿದ್ದು, ಬಳಿಕ ಅವರ ವಿರುದ್ಧದ ವಿಚಾರಣೆಯನ್ನು ಕೊನೆಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *