ವರದಕ್ಷಿಣೆ ಕಿರುಕುಳ ಆರೋಪ – ದೇಹದ ಮೇಲೆ ಡೆತ್‌ನೋಟ್ ಬರೆದು ಮಹಿಳೆ ಆತ್ಮಹತ್ಯೆ

Public TV
1 Min Read

ಲಕ್ನೋ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ತನ್ನ ದೇಹದ ಮೇಲೆಯೇ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ (Uttar Pradesh) ಬಾಗ್‌ಪತ್‌ನಲ್ಲಿ (Baghpat) ನಡೆದಿದೆ.

ಮನೀಷಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಆಕೆ ತೋಳು, ಕಾಲು ಹಾಗೂ ಹೊಟ್ಟೆಯ ಮೇಲೆ ನನ್ನ ಸಾವಿಗೆ ಪತಿ ಹಾಗೂ ಅತ್ತೆಯೇ ಕಾರಣ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

ಮನೀಷಾ 2023ರಲ್ಲಿ ನೋಯ್ಡಾ (Noida) ನಿವಾಸಿ ಕುಂದನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ಪತಿ ಹಾಗೂ ಅತ್ತೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಬರೆದಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ವಿದ್ಯುತ್ ಶಾಕ್‍ಗೆ ನವವಿವಾಹಿತ ಲೈನ್‍ಮೆನ್ ಬಲಿ

ಅಲ್ಲದೇ ಮನೀಷಾ ವೀಡಿಯೋ ಮೂಲಕವು ಕಿರುಕುಳದ ಕ್ರೂರತೆ ಬಗ್ಗೆ ವಿವರಿಸಿದ್ದಾರೆ. ಈ ವೀಡಿಯೋ ಕ್ಲಿಪ್‌ನಲ್ಲಿ ಮನೀಷಾ ಅಳುತ್ತಾ ತನ್ನ ಪತಿ, ಅವರ ತಾಯಿ, ತಂದೆ ಮತ್ತು ಸಹೋದರ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಮದುವೆ ಸಂದರ್ಭದಲ್ಲಿ ಮನೀಷಾ ಕುಟುಂಬಸ್ಥರು 20 ಲಕ್ಷ ರೂ. ಖರ್ಚು ಮಾಡಿದ್ದರು. ಅಲ್ಲದೇ ವರದಕ್ಷಿಣೆಯಾಗಿ ಬುಲೆಟ್ ಬೈಕ್ ಸಹ ನೀಡಿದ್ದರು. ಆದರೆ ಪತಿ ಮನೆಯವರು ಪದೇ ಪದೇ ಕಾರು ಮತ್ತು ಹಣವನ್ನು ಕೇಳುತ್ತಿದ್ದರು ಎಂದಿದ್ದಾರೆ.

ಅತ್ತೆ ಮತ್ತು ಪತಿ ತನ್ನನ್ನು ಹೊಡೆಯುತ್ತಿದ್ದರು. ಅಲ್ಲದೇ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ವರದಕ್ಷಿಣೆ ಬೇಡಿಕೆಗಳಿಗೆ ಮಣಿಯದಿದ್ದಾಗ, ಅತ್ತೆ ಮತ್ತು ಪತಿ ವಿದ್ಯುತ್ ಸ್ಪರ್ಶಿಸಿ ಕೊಲ್ಲಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್‌ ಪಾರ್ಟಿ

ಕಿರುಕುಳದಿಂದ ಬೇಸತ್ತಿದ್ದ ಮನೀಷಾ, ಜುಲೈ 2024ರಲ್ಲಿ ತವರು ಮನೆಗೆ ಬಂದಿದ್ದರು. ಕಳೆದ 4 ದಿನಗಳ ಹಿಂದೆ ವಿಚ್ಛೇದನ ಬಗ್ಗೆ ಮನೀಷಾ ಕುಟುಂಬಸ್ಥರು ಚರ್ಚಿಸಿದ್ದರು. ಅತ್ತೆ ಮತ್ತು ಪತಿ ವರದಕ್ಷಿಣೆ ವಸ್ತುಗಳನ್ನು ಹಿಂದಿರುಗಿಸುವವರೆಗೆ ವಿಚ್ಛೇದನ ಪತ್ರಗಳಿಗೆ ಸಹಿ ಹಾಕುವುದಿಲ್ಲ ಎಂದು ಹೇಳಿದ್ದರು ಎನ್ನಲಾಗಿದೆ.

Share This Article