ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ- ಉಪೇಂದ್ರ

By
2 Min Read

ಸ್ಯಾಂಡಲ್‌ವುಡ್ (Sandalwood) ನಟ ಉಪೇಂದ್ರ (Upendra) ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಿಂದ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಇಂದು (ಆಗಸ್ಟ್ 13)ರಂದು ಪ್ರಕರಣ ದಾಖಲಾಗಿದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ ಎಂದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಉಪೇಂದ್ರ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಚಿತ್ರೀಕರಣಕ್ಕೆ ಬ್ರೇಕ್‌ – ಅಮೆರಿಕದಲ್ಲಿ ಪ್ರಭಾಸ್‌ಗೆ ಶಸ್ತ್ರಚಿಕಿತ್ಸೆ

ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ ಎಂದು ಉಪೇಂದ್ರ (Upendra) ಸೋಷಿಯಲ್‌ ಮೀಡಿಯಾದಲ್ಲಿ ಬೇಸರ ಹೊರಹಾಕಿದ್ದಾರೆ.

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪವನ್ನ ಉಪೇಂದ್ರ ಅವರು ಎದುರಿಸುತ್ತಿದ್ದಾರೆ. ಉಪೇಂದ್ರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ.

ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ, ಮೊದಲಿಗೆ ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು. ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರರ ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಬಳಿಕ ಅವರು ಕ್ಷಮಾಪಣೆ ಕೇಳಿದ್ದರು.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್