ಟಿಶ್ಯೂ ಪೇಪರ್ ವಿಚಾರಕ್ಕೆ ಗಲಾಟೆ- ಇಬ್ಬರು ಯುವಕರಿಗೆ ಚಾಕು ಇರಿತ

By
1 Min Read

ರಾಯಚೂರು: ಟಿಶ್ಯೂ ಪೇಪರ್ (Tissue Paper) ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಪಾನ್ ಶಾಪ್ (Pan Shop) ಮಾಲೀಕ ಇಬ್ಬರು ಯುವಕರಿಗೆ ಚಾಕು ಇರಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ (Manvi) ಪಟ್ಟಣದಲ್ಲಿ ನಡೆದಿದೆ.

ವೀರೇಶ್ ಚಾಕು ಇರಿದ ಪಾನ್ ಶಾಪ್ ಮಾಲೀಕ. ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರನ್ನು ಅಟ್ಟಾಡಿಸಿ ವೀರೇಶ್ ಚಾಕು ಇರಿದಿದ್ದಾನೆ. ಗಲಾಟೆಯಲ್ಲಿ ರಮೇಶ್ ಮತ್ತು ಸತ್ತರ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ರಮೇಶ್ ಹಾಗೂ ಸತ್ತರ್ ಸ್ನೇಹಿತರ ಜೊತೆ ಡಾಬಾದಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಡಾಬಾದ ಒಳಗಡೆ ಬಂದಿದ್ದ ಪಾನ್ ಶಾಪ್ ಮಾಲೀಕ ವಿರೇಶ್‌ನನ್ನು ಕಂಡು ವೇಟರ್ ಟಿಶ್ಯೂ ಪೇಪರ್ ಕೊಡು ಎಂದು ಸತ್ತರ್ ಕೇಳಿದ್ದಾನೆ. ಇದರಿಂದ ಗಲಾಟೆ ಆರಂಭಗೊಂಡಿದ್ದು, ಈರುಳ್ಳಿ ಕತ್ತರಿಸಲು ಇಟ್ಟಿದ್ದ ಚಾಕುವಿನಿಂದ ವೀರೇಶ್ ಯುವಕರಿಗೆ ಇರಿದಿದ್ದಾನೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬಿಎಂಟಿಸಿಗೆ ಇಬ್ಬರು ಬಲಿ

ಗಲಾಟೆ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಗಾಯಾಳುಗಳಿಗೆ ಮಾನ್ವಿ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿರೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್