ಆದಿಚುಂಚನಗಿರಿಗೆ ಯುಪಿಎಸ್‍ಸಿ ಟಾಪರ್ ನಂದಿನಿ ಭೇಟಿ

Public TV
1 Min Read

ಮಂಡ್ಯ: 2016ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದ ಕೋಲಾರದ ಕೆ.ಆರ್. ನಂದಿನಿ ಅವರು ಶುಕ್ರವಾರ ಸಂಜೆ ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿಗಳ ಆರ್ಶೀವಾದ ಪಡೆದಿದ್ದಾರೆ.

ಕುಟಂಬ ಸಮೇತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಆರ್.ನಂದಿನಿ, ಮಠದಲ್ಲಿ ನಡೆದ ಪೌರ್ಣಿಮೆ ಪೂಜೆಯಲ್ಲಿ ಭಾಗವಹಿಸಿದ್ರು. ಬಳಿಕ ನಿರ್ಮಲಾನಂದನಾಥ ಸ್ವಾಮೀಜಿಗಳ ಆರ್ಶೀವಾದ ಪಡೆದ್ರು. ಪರೀಕ್ಷೆಯಲ್ಲಿ ಟಾಪರ್ ಆಗಿ ಅತ್ಯುತ್ತಮ ಸಾಧನೆ ಮಾಡಿದ ನಂದಿನಿ ಅವರನ್ನ ನಿರ್ಮಲಾನಂದನಾಥ ಸ್ವಾಮೀಜಿ ಅಭಿನಂದಿಸಿದ್ರು.

ಇದನ್ನೂ ಓದಿ: ಹೈಟೆಕ್ ಆಗ್ತಿದೆ ಕೋಲಾರ ಮುನೇಶ್ವರ ನಗರ: ಇದು ಯುಪಿಎಸ್‍ಸಿ ಟಾಪರ್ ನಂದಿನಿ ಎಫೆಕ್ಟ್ ವಿಡಿಯೋ ನೋಡಿ

ಚಿನ್ನದ ಗಣಿ ನಾಡಿನ ಖ್ಯಾತಿಯ ಕೋಲಾರದ ಹೆಣ್ಣು ಮಗಳು ನಂದಿನಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಯುಪಿಎಸ್‍ಸಿ ಇತಿಹಾಸದಲ್ಲಿ ಎರಡನೇ ಬಾರಿಗೆ ಕನ್ನಡತಿಯೊಬ್ಬರು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದಂತಾಗಿದೆ. ಕೋಲಾರ ಜಿಲ್ಲೆ ಕೆಂಬೋಡಿ ಗ್ರಾಮದ ಕೆ.ಆರ್ ನಂದಿನಿ ಸದ್ಯ ಹರ್ಯಾಣಾದ ಫರೀದಾಬಾದ್‍ನಲ್ಲಿ ಐ.ಆರ್.ಎಸ್ ತರಬೇತಿಯಲ್ಲಿದ್ದಾರೆ. ಕೆ.ಆರ್. ನಂದಿನಿ, ನಿವೃತ್ತ ಹೈಸ್ಕೂಲ್ ಶಿಕ್ಷಕರಾದ ರಮೇಶ್ ಅವರ ಪುತ್ರಿ.

ಕೋಲಾರದ ಚಿನ್ಮಯ ಸ್ಕೂಲ್‍ನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಮಾಡಿದ ನಂದಿನಿ, ಪಿಯುಸಿಯನ್ನು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪೂರೈಸಿದರು. ನಂತ್ರ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಬಿಇ ಪದವಿ ಪಡೆದ್ರು. ನಂತರ ದೆಹಲಿ ಕರ್ನಾಟಕ ಭವನದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ರು. ಕಳೆದ ಬಾರಿಯ ಯುಪಿಎಸ್‍ಸಿ ಪರೀಕ್ಷೆಯಲ್ಲಿ 849ನೇ ಸ್ಥಾನ ಪಡೆದು ಭಾರತೀಯ ಕಂದಾಯ ಸೇವೆಗೆ ಆಯ್ಕೆಯಾಗಿದ್ದರು. ಐಆರೆಸ್ ಅಧಿಕಾರಿಯಾಗಿದ್ದುಕೊಂಡೇ ಐಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಕೆ.ಆರ್. ನಂದಿನಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

https://www.youtube.com/watch?v=uGLO7ROjcVg

Share This Article
Leave a Comment

Leave a Reply

Your email address will not be published. Required fields are marked *