ಹೈದರಾಬಾದ್: ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ (Hyderabad) ನಡೆದಿದೆ. ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್ ಆದ ಮೋಹನ!
ಸುಷ್ಮಾ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಶಾಪಿಂಗ್‌ಗಾಗಿ ತನ್ನ ತಾಯಿ ಲಲಿತಾ (44) ಅವರ ಮನೆಗೆ ಹೋಗಿದ್ದರು. ಈ ವೇಳೆ ತನ್ನ ಮಗುವಿನೊಂದಿಗೆ ಮತ್ತೊಂದು ಕೋಣೆಗೆ ಹೋಗಿ, ಮಗುವಿಗೆ ವಿಷ ನೀಡಿ, ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪತಿ (Husband) ಕೆಲಸ ಮುಗಿಸಿ ವಾಪಸ್ ಮನೆಗೆ ಬಂದು ರೂಮ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು, ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಹೆಂಡತಿ ಮತ್ತು ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಇಬ್ಬರು ಮೃತಪಟ್ಟಿದ್ದಾರೆ ಎಂದು ಈ ವೇಳೆ ತಿಳಿಸಿದ್ದಾರೆ.
ತನ್ನ ಮಗಳು ಮತ್ತು ಮೊಮ್ಮಗ ಸತ್ತಿರುವುದನ್ನು ನೋಡಿದ ಲಲಿತಾ ಆಘಾತವನ್ನು ಸಹಿಸಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕುಟುಂಬದ ಸದಸ್ಯರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಮಗಳ ಸಾವಿಗೆ ಪೋಷಕರೆ ಕಾರಣನಾ? ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್!

