ಊರ್ವಶಿ ರೌಟೇಲಾ ಜಲ ಸಂರಕ್ಷಣೆ ಅಭಿಯಾನದ ರಾಯಭಾರಿ

Public TV
1 Min Read

ನವದೆಹಲಿ: ನಟಿ ಊರ್ವಶಿ ರೌಟೇಲಾರನ್ನು ಮಿಷನ್ ಪಾನಿ ಜಲಶಕ್ತಿ, ಜಲ ಸಂರಕ್ಷಣೆ ಅಭಿಯಾನದ ರಾಯಭಾರಿಯಾಗಿ ಅಯ್ಕೆ ಮಾಡಲಾಗಿದೆ.

ಊರ್ವಶಿ ರೌಟೇಲಾ ಫೌಂಡೇಶನ್ ಮೂಲಕವಾಗಿ ನೀರಿನ ಬಿಕ್ಕಟ್ಟಿನ ವಿರುದ್ಧ ಹೋರಾಡಿದ್ದಾರೆ. ತಮ್ಮ ಪೋಷಕರೊಂದಿಗೆ ಸ್ಥಾಪಿಸಿದ್ದ ಸಂಸ್ಥೆ ಉತ್ತರಾಖಂಡ್, ಪೌರಿ, ಗರ್ವಲ್ ಮತ್ತು ಹರಿದ್ವಾರದ ನೂರಾರು ಸಮುದಾಯಗಳಿಗೆ ಶುದ್ಧ ಮತ್ತು ಸುರಕ್ಷಿತ ನೀರು ಪಡೆಯಲು ಸಹಾಯ ಮಾಡಿದೆ. ಈ ಎಲ್ಲವನ್ನು ಗಮನಿಸಿದ ಕೇಂದ್ರ ಸರ್ಕಾರ ಊರ್ವಶಿಯವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದೆ. ಇದನ್ನೂ ಓದಿ:  ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

ನನ್ನ ಜೀವನದಲ್ಲಿ ಈ ಎಲ್ಲಾ ವಿಶ್ವ ದರ್ಜೆಯ ಅವಕಾಶಗಳನ್ನು ಸ್ವೀಕರಿಸುತ್ತಿರುವುದಕ್ಕೆ ಕೃತಜ್ಞಳಾಗಿದ್ದೇನೆ. ಕೇಂದ್ರ ಸರ್ಕಾರ ನನಗೆ ಹೊಸ ಅವಕಾಶವನ್ನು ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖವತ್ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಹಸೆಮಣೆ ಏರಲು ಸಿದ್ಧರಾದ ವಜ್ರಕಾಯ ಬೆಡಗಿ ಶುಭ್ರಾ ಅಯ್ಯಪ್ಪ

ಮಿಸ್ ಯೂನಿವರ್ಸ್ 2021ರ ತೀರ್ಪುಗಾರರಿಂದ ಆರಂಭಗೊಂಡು ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಜ್ಯೂರಿ ಆಗಿ ಕೆಲಸ ಮಾಡಿದ್ದಾರೆ. ಊರ್ವಶಿ ಅವರು  ‘ದಿ ಲೆಜೆಂಡ್’ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡಲಿದ್ದಾರೆ. ಹಾಗೇ ಜಲಶಕ್ತಿ ಅಭಿಯಾನದ ರಾಯಭಾರಿಯಾಗಿ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *