ನಾನು ಅಮೆರಿಕ ಅಧ್ಯಕ್ಷನಾಗಿ ಆಯ್ಕೆಯಾಗದಿದ್ದರೆ ದೇಶದಲ್ಲಿ ರಕ್ತಪಾತವಾಗುತ್ತೆ: ಟ್ರಂಪ್‌

By
1 Min Read

ವಾಷಿಂಗ್ಟನ್‌: ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ (US Presidential Election) ನಾನು ಆಯ್ಕೆಯಾಗದಿದ್ದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ‌ಟ್ರಂಪ್‌ (Donald Trump) ಎಚ್ಚರಿಕೆ ನೀಡಿದ್ದಾರೆ.

ಓಹಿಯೋದ ಡೇಟನ್ ಬಳಿ ರ‍್ಯಾಲಿಯಲ್ಲಿ ಮಾತನಾಡಿದ ಟ್ರಂಪ್, ಈ ಬಾರಿ ನಾನು ಚುನಾಯಿತನಾಗದಿದ್ದರೆ ರಕ್ತಪಾತವಾಗುತ್ತದೆ ಎಂದು ಮಾತನಾಡಿದ್ದಾರೆ. ತಾನು ಮರು ಆಯ್ಕೆಯಾದರೆ ಚೀನಾವು ಅಮೆರಿಕಕ್ಕೆ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ ಎಂದು ಟ್ರಂಪ್‌ ಹೇಳಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಬೆಂಕಿ ಅವಘಡ – ಕೆನಡಾದಲ್ಲಿ ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

ಚುನಾವಣೆ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ವಿರುದ್ಧ ಟ್ರಂಪ್‌ ವಾಗ್ದಾಳಿ ನಡೆಸುತ್ತಿದ್ದಾರೆ. ಬೈಡೆನ್‌ ಆಡಳಿತದ ಬಗ್ಗೆ ಟೀಕಾಪ್ರಹಾರ ನಡೆಸುತ್ತಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬೈಡೆನ್ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ರಮವಾಗಿ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ಅಧ್ಯಕ್ಷೀಯ ನಾಮನಿರ್ದೇಶನಗಳನ್ನು ಪಡೆದುಕೊಂಡಿದ್ದಾರೆ. ಪರಸ್ಪರು ಅಧ್ಯಕ್ಷ ಸ್ಥಾನಕ್ಕಾಗಿ ಮತ್ತೆ ಫೈಟ್‌ಗೆ ಇಳಿದಿದ್ದಾರೆ. ಇದನ್ನೂ ಓದಿ: ಆಹಾರಕ್ಕಾಗಿ ಕಾಯುತ್ತಿದ್ದ ಸಂತ್ರಸ್ತರಿದ್ದ ಶೆಲ್‌ ಮೇಲೆ ದಾಳಿ – 20 ಮಂದಿ ಸಾವು

ಟ್ರಂಪ್ ಬುಧವಾರ ಬೆಳಗ್ಗೆ ಅಧ್ಯಕ್ಷರ ರಿಪಬ್ಲಿಕನ್ ನಾಮನಿರ್ದೇಶನ ಗೆದ್ದರು. ಬೈಡೆನ್ ಡೆಮಾಕ್ರಟಿಕ್ ಅನುಮೋದನೆಯನ್ನು ಪಡೆದುಕೊಂಡಿದ್ದಾರೆ.

Share This Article