US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

1 Min Read

ಟೆಹ್ರಾನ್‌: ಅಮೆರಿಕ, ಇಸ್ರೇಲ್‌-ಇರಾನ್‌ ಮಧ್ಯೆ ನಡುವೆ ನಡೆಯುತ್ತಿರುವ ಯುದ್ಧ ಕೊನೆಗೊಳ್ಳುವ ಲಕ್ಷಣಗಳು ಕಾಣಿಸಿವೆ.

ಅಮೆರಿಕದ ನೆಲೆಗಳು (USA Base) ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್‌ (Iran) ಹೇಳಿದೆ

ಇರಾನ್‌ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್(Masoud Pezeshkian) ಅವರು, ಇರಾನ್‌ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು. ಸಂಘರ್ಷದ ಸಮಯದಲ್ಲಿ ಉಂಟಾದ ಹಾನಿಗಳಿಗೆ ಪರಿಹಾರ ನೀಡಬೇಕು. ಭವಿಷ್ಯದಲ್ಲಿ ಆಕ್ರಮಣ ಮಾಡುವುದಿಲ್ಲ ಎಂದು ದೃಢವಾದ ಅಂತರರಾಷ್ಟ್ರೀಯ ಖಾತರಿಗಳನ್ನು ನೀಡಬೇಕು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ


ರಷ್ಯಾ ಮತ್ತು ಪಾಕಿಸ್ತಾನದ ನಾಯಕರ ಜೊತೆ ಮಾತನಾಡುವ ವೇಳೆ ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ. ಈ ಪ್ರದೇಶದಲ್ಲಿ ಶಾಂತಿಗೆ ಇರಾನ್‌ನ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ. ಜಿಯೋನಿಸ್ಟ್ ಆಡಳಿತ ಮತ್ತು ಅಮೆರಿಕ ಹೊತ್ತಿಸಿದ ಈ ಯುದ್ಧವನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಇದು ಎಂದು ಬರೆದಿದ್ದಾರೆ. ಇದನ್ನೂ ಓದಿ: ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?

ಈ ಹಿಂದೆ ಡೊನಾಲ್ಡ್‌ ಟ್ರಂಪ್‌ ಇರಾನ್‌ ಬೇಷರತ್ತಾಗಿ ಶರಣಾಗಬೇಕು ಎಂದು ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಗೆ ಪ್ರತಿಕ್ರಿಯಿಸಿದ ಮಸೌದ್ ಪೆಜೆಶ್ಕಿಯಾನ್ ಅದು ಅಮೆರಿಕವನ್ನು ಸಮಾಧಿಗೆ ಕೊಂಡೊಯ್ಯಬೇಕಾದ ಕನಸು ಎಂದು ತಿರುಗೇಟು ನೀಡಿದ್ದರು.
Share This Article