ಉಕ್ರೇನ್‍ಗೆ ಆಹಾರ, ಹಣ, ಆಯುಧಗಳ ನೆರವು: ಜೋ ಬೈಡನ್

Public TV
2 Min Read

ವಾಷಿಂಗ್ಟನ್: 20ನೇ ದಿನಕ್ಕೆ ಕಾಲಿಟ್ಟಿರುವ ರಷ್ಯಾ ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್‍ಗೆ ಆಯುಧಗಳು, ಆಹಾರ ಮತ್ತು ಹಣದ ರೂಪದಲ್ಲಿ ಬೆಂಬಲ ನೀಡುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.

ಉಕ್ರೇನ್‍ನ ಮೇಲೆ ರಷ್ಯಾ ದಾಳಿ ತಾರಕಕ್ಕೆ ಏರುತ್ತಿದ್ದು, ಈ ಬಗ್ಗೆ ಅನೇಕ ರಾಷ್ಟ್ರಗಳು ವಿರೋಧವನ್ನು ವ್ಯಕ್ತಪಡಿಸಿದೆ. ಅದರಲ್ಲೂ ಪ್ರಮುಖವಾಗಿ ಅಮೆರಿಕ ಮೊದಲನಿಂದಲೂ ವಿರೋಧವನ್ನು ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ಟ್ವೀಟ್ ಮಾಡಿ, ಉಕ್ರೇನಿನ ಜನರು ಯುದ್ಧದಿಂದ ಹಾನಿಯಾದ ಪ್ರದೇಶಗಳನ್ನು ತೊರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರನ್ನು ನಾವು ಸ್ವಾಗತಿಸಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು.

ಟ್ವೀಟ್‍ನಲ್ಲಿ ಏನಿದೆ?:
ರಷ್ಯಾವನ್ನು ಎದುರಿಸಲು ಉಕ್ರೇನ್‍ನ ಬಳಿ ಸಾಕಷ್ಟು ಶಸ್ತ್ರಗಳಿವೆಯೇ ಎಂಬುದನ್ನು ನಾವು ಖಚಿತ ಪಡಿಸಿಕೊಳ್ಳುತ್ತಿದ್ದೇವೆ. ಜೊತೆಗೆ ಅಲ್ಲಿನ ನಾಗರಿಕರ ಜೀವವನ್ನು ಉಳಿಸಲು ಹಣ ಮತ್ತು ಆಹಾರವನ್ನು ಕಳಿಸುತ್ತೇವೆ. ಅಲ್ಲದೆ ಉಕ್ರೇನ್‍ನ ನಿರಾಶ್ರಿತರನ್ನು ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

ನಿನ್ನೆ ಉಕ್ರೇನ್ ವಿರುದ್ಧ ದಾಳಿ ನಡೆಸುತ್ತಿರುವ ರಷ್ಯಾ ತನ್ನ ಯುದ್ಧವನ್ನು ಮುಂದುವರಿಸಲು ಡ್ರೋನ್‍ಗಳು ಸೇರಿದಂತೆ ಮಿಲಿಟರಿ ನೆರವು ನೀಡುವಂತೆ ರಷ್ಯಾ ಚೀನಾವನ್ನು ಕೇಳಿದೆ ಎಂದು ಅಮೆರಿಕದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದರು. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬವೇ ಹೊಣೆ: ಅಮರೀಂದರ್ ಸಿಂಗ್

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಅಮೆರಿಕ ಮತ್ತು ಯುರೋಪಿಯನ್ ಮಿತ್ರರಾಷ್ಟ್ರಗಳು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ರಷ್ಯಾದ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ರಷ್ಯಾದ ಹಲವಾರು ಪ್ರಮುಖ ಬ್ಯಾಂಕ್‍ಗಳ ಮೇಲೆ ನಿಬರ್ಂಧ ಹೇರಿದೆ. ಜೊತೆಗೆ ರಷ್ಯಾವನ್ನು SWIFTಹಣಕಾಸು ವ್ಯವಸ್ಥೆಯಿಂದ ಹೊರಹಾಕಿದೆ.

Share This Article
Leave a Comment

Leave a Reply

Your email address will not be published. Required fields are marked *