ಆಕ್ಷೇಪಾರ್ಹ ಪದ ಬಳಕೆ: ನಟ ಉಪೇಂದ್ರ ಗೆ ನೋಟಿಸ್

Public TV
2 Min Read

ಕ್ಷೇಪಾರ್ಹ ಪದ ಬಳಕೆ ಮಾಡಿದ ನಟ ಉಪೇಂದ್ರ ಅವರಿಗೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ. ತಕ್ಷಣ ವಿಚಾರಣೆಗೆ ಹಾಜರಾಗುಂತೆ ಉಪೇಂದ್ರ ಅವರಿಗೆ ಪೊಲೀಸರು (Police) ನೋಟಿಸ್ (Notice) ನೀಡಿದ್ದಾರೆ. ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಆರೋಪದ‌ ಮೇಲೆ  ಉಪೇಂದ್ರ ವಿರುದ್ಧ. ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಆಗಿತ್ತು.

ದೂರುದಾರ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್ ಸಮ್ಮುಖದಲ್ಲಿ ಉಪೇಂದ್ರ ಮನೆ ಮಹಜರ್ ಮಾಡಲಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಕತ್ರಿಗುಪ್ಪೆ ಮನೆಯಲ್ಲಿ ಪೊಲೀಸರು ಮಹಜರ್  ಮಾಡಲಿದ್ದಾರೆ. ಉಪೇಂದ್ರ ಕತ್ರಿಗುಪ್ಪೆ ಮನೆಯಲ್ಲಿ ಕೂತು ವಿಡಿಯೋ ಮಾಡಿರೋ ಹಿನ್ನಲೆ ಕತ್ರಿಗುಪ್ಪೆ ಮನೆ ಮಹಜರ್ ಮಾಡಲಿದ್ದಾರೆ.

ಏನಿದು ಪ್ರಕರಣ?

ನಿನ್ನೆಯಷ್ಟೇ ಸ್ಯಾಂಡಲ್‌ವುಡ್ (Sandalwood) ನಟ ಉಪೇಂದ್ರ (Upendra) ಮೇಲೆ ಎಫ್‌ಐಆರ್ ದಾಖಲಾಗಿತ್ತು. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್‌ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಇದೀಗ ಉಪೇಂದ್ರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ರಣಧೀರ ಪಡೆ ಹರೀಶ್ ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಇದೂವರೆಗೂ ಉಪೇಂದ್ರ ವಿರುದ್ದ ಎರಡು ಎಫ್ ಐ ಆರ್ ದಾಖಲಾಗಿದ್ದು, ವಿಚಾರಣೆ ಎದುರಿಸಬೇಕಾಗಿದೆ. ಇದನ್ನೂ ಓದಿ:ಚಿತ್ರೀಕರಣಕ್ಕೆ ಬ್ರೇಕ್‌ – ಅಮೆರಿಕದಲ್ಲಿ ಪ್ರಭಾಸ್‌ಗೆ ಶಸ್ತ್ರಚಿಕಿತ್ಸೆ

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪವನ್ನ ಉಪೇಂದ್ರ ಅವರು ಎದುರಿಸುತ್ತಿದ್ದಾರೆ. ಉಪೇಂದ್ರ ವಿರುದ್ಧ ಕಾನೂನು ಹೋರಾಟಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಹರೀಶ್ ಮುಂದಾಗಿದ್ದಾರೆ.

ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ, ಮೊದಲಿಗೆ ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು. ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರರ ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್