Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌

Public TV
1 Min Read

ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬುಲ್ಡೋಜರ್‌ ಟ್ರೆಂಡ್‌ ಆಗಿದೆ.

ಬುಲ್ಡೋಜರ್‌ ಟ್ರೆಂಡ್‌ ಆಗಲು ಕಾರಣವಿದೆ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ‘ಬುಲ್ಡೋಜರ್ ಬಾಬಾ’ ಎಂದು ವ್ಯಂಗ್ಯವಾಡಿದ್ದರು.

ಯೋಗಿ ಆದಿತ್ಯನಾಥ್ ಬುಲ್ಡೋಜರ್‌ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‌ಪ್ರೆಸ್‌ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು. ಇದನ್ನೂ ಓದಿ: ಪಂಜಾಬ್ ಚುನಾವಣಾ ಫಲಿತಾಂಶ ಕರ್ನಾಟಕ ಕಾಂಗ್ರೆಸ್‌ಗೆ ಪಾಠವಾಗುತ್ತಾ?

ಸುಲ್ತಾನ್‌ಪುರ ಚುನಾವಣಾ ಪ್ರಚಾರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಬುಲ್ಡೋಜರ್‌ಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು. ನನ್ನ ಪ್ರಚಾರ ಸಭೆಗೆ ಬುಲ್ಡೋಜರ್‌ಗಳು ಕೂಡಾ ಬಂದಿವೆ ಎಂದು ಯೋಗಿ ಆದಿತ್ಯನಾಥ್ ಕ್ಯಾಮೆರಾಮ್ಯಾನ್‌ಗೆ ತೋರಿಸುವ ವಿಡಿಯೋವನ್ನು ಅಪ್ಲೋಡ್‌ ಮಾಡಿದ್ದರು. ಆದಿತ್ಯನಾಥ್ ಬುಲ್ಡೋಜರ್‌ಗಳನ್ನು ನೋಡಿ ಖುಷಿಪಡುವ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅಖಿಲೇಶ್‌ ಯಾದವ್‌, ಕರಾಳ ಕೃಷಿ ಕಾಯ್ದೆ ರದ್ದಾಗುವುದಾದರೆ, ಬಾಬಾ ಕೂಡ ಹೋಗುತ್ತಾರೆ. ಅವರು ಎಲ್ಲದರ ಹೆಸರು ಬದಲಿಸಿದರು, ಹೀಗಾಗಿ ನಾವು ಅವರನ್ನು ಬಾಬಾ ಬುಲ್ಡೋಜರ್‌ ಎಂದು ಕರೆಯುತ್ತೇವೆ ಎಂದು ವ್ಯಂಗ್ಯವಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *