ಜೈಲಿನಿಂದಲೇ ಅಜಂ ಖಾನ್‌ ವಿಧಾನಸಭೆಗೆ ಎಂಟ್ರಿ

Public TV
1 Min Read

ಲಕ್ನೋ: ದೇಶದಲ್ಲಿ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಹಲವು ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸುತ್ತಿರುವ ಸಮಾಜವಾದಿ ಪಕ್ಷದ ಅಜಂ ಖಾನ್‌ ಅವರು ಭಾರಿ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅಜಂ ಖಾನ್ 63,642 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಬಿಜೆಪಿಯ ಆಕಾಶ್ ಸಕ್ಸೇನಾ ವಿರುದ್ಧ 50,880 ಮತಗಳ ಅಂತರದಿಂದ ಭಾರಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

ಎಸ್‌ಪಿ ಅಭ್ಯರ್ಥಿ ಅಜಂ ಖಾನ್ ಅವರ ಮೇಲೆ ದಾಖಲಾಗಿರುವ ಹಲವು ದೂರುಗಳ ಹಿನ್ನೆಲೆಯಲ್ಲಿ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ. ಭೂ ಕಬಳಿಕೆಯೂ ಸೇರಿದಂತೆ ಖಾನ್‌ ವಿರುದ್ಧ ಉತ್ತರ ಪ್ರದೇಶದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹತ್ತಾರು ದೂರುಗಳು ದಾಖಲಾಗಿದ್ದು, ಸರ್ಕಾರವೂ ‘ಭೂ ಮಾಫಿಯಾ’ಗಳ ಪಟ್ಟಿಯಲ್ಲಿ ಆಜಂ ಅವರ ಹೆಸರನ್ನು ಪ್ರಕಟಿಸಿತ್ತು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಟಿ, ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಗ್ಗೆಯೂ ರಾಂಪುರ ಠಾಣೆಯ ಪೊಲೀಸರು ದೂರು ದಾಖಲಿಸಿದ್ದರು. ಇದಲ್ಲದೆ ಆಜಂ ಅವರು ತಮ್ಮ ಕೃಷಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ 25ಕ್ಕೂ ಹೆಚ್ಚು ರೈತರು ಇತ್ತೀಚೆಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮೌನವಾಗಿರುವ ಬಿಜೆಪಿ ಮತದಾರರು ದೊಡ್ಡ ಸಂದೇಶ ಕೊಟ್ಟಿದ್ದಾರೆ: ತೇಜಸ್ವಿ ಸೂರ್ಯ 

ಮಗನ ಜನನ ದಿನಾಂಕದ ನಕಲಿ ಪ್ರಮಾಣಪತ್ರ ಪ್ರಕರಣದಲ್ಲಿ ಪತ್ನಿ ಮತ್ತು ಮಗ ಸೇರಿದಂತೆ ಖಾನ್ ಅವರನ್ನು ಫೆ.23 ರಂದು ಬಂಧಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *