ಹಾರಿ ಬಂದು ಹೊಟ್ಟೆಗೆ ಚುಚ್ಚಿದ ಮೀನು – ಮೀನುಗಾರಿಕೆಗೆ ತೆರಳಿದ್ದ ಯುವಕ ದುರ್ಮರಣ

Public TV
1 Min Read

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನ ಹೊಟ್ಟೆಗೆ ಹಾರಿ ಬಂದ ಮೀನೊಂದು ಚುಚ್ಚಿ ಸಾವನ್ನಪ್ಪಿದ ಅಪರೂಪದ ಘಟನೆ ಕಾರವಾರದಲ್ಲಿ ನಡೆದಿದೆ.

ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ ಅಕ್ಷಯ ಅನಿಲ ಮಾಜಾಳಿಕರ್ (24) ಮೃತ ಯುವಕ. ಅಕ್ಷಯ ಮಂಗಳವಾರ (ಅ.14) ಎಂದಿನಂತೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಈ ದುರಂತ ನಡೆದಿದೆ. ಇದನ್ನೂ ಓದಿ: Uttara Kannada | ಬೇಲಿಕೇರಿ ಬಂದರಿನಲ್ಲಿ ಬೋಟ್ ಮುಳುಗಡೆ

ಮೀನುಗಾರಿಕೆ ನಡೆಸುತ್ತಿದ್ದಾಗ ನೀರಿನಿಂದ ಸುಮಾರು 8 ರಿಂದ 10 ಇಂಚು ಉದ್ದದ ಮೀನೊಂದು ದೋಣಿಯೊಳಗೆ ಹಾರಿ ಬಂದಿದೆ. ಈ ಮೀನು ನೇರವಾಗಿ ಅಕ್ಷಯನ ಹೊಟ್ಟೆಗೆ ಚುಚ್ಚಿದ್ದು, ಆತನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಗಾಯದ ಭಾಗಕ್ಕೆ ಹೊಲಿಗೆ ಹಾಕಿ, ಡಿಸ್ಚಾರ್ಜ್ ಮಾಡಿದ್ದರು. ಇದನ್ನೂ ಓದಿ: 

ನೋವು ಕಡಿಮೆ ಆಗದ ಕಾರಣ ಬುಧವಾರ (ಅ.15) ಅಕ್ಷಯ ಮರಳಿ ಆಸ್ಪತ್ರೆಗೆ ದಾಖಲಾಗಿದ್ದ. ಗುರುವಾರ (ಅ.16) ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕಾರವಾರ| ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

Share This Article